ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಮೂಲಕ ರೈತರಿಗೆ ಪ್ರತಿ ವರ್ಷ 6000 ರೂ. ಜಮೆ ಮಾಡಲಾಗುತ್ತಿದೆ. ಈ ಹಣವನ್ನು ವರ್ಷದಲ್ಲಿ ಮೂರು ಕಂತುಗಳಲ್ಲಿ ತಲಾ 2000 ರೂ. ನಂತೆ ಅನ್ನದಾತರಿಗೆ ನೀಡಲಾಗುತ್ತಿದೆ.
ಇದೀಗ ಫೆಬ್ರವರಿ 24ರಂದು ರೈತರ ಖಾತೆಗಳಿಗೆ ಜಮಾ ಆಗುತ್ತದೆ ಎಂದು ಹೇಳಲಾಗುತ್ತದೆ. ಫೆಬ್ರವರಿ ಅಂತ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಬಿಹಾರಕ್ಕೆ ಭೇಟಿ ನೀಡುತ್ತಿದ್ದಾರೆ. ಆಗ ಈ ಹಣ ಬಿಡುಗಡೆಯ ಬಗ್ಗೆ ಘೋಷಣೆ ಮಾಡಲಿದ್ದಾರೆ ಎನ್ನಲಾಗಿದೆ.