ನವದೆಹಲಿ: ಕ್ರಿಸ್ಮಸ್ ಹಬ್ಬದ ಅಂಗವಾಗಿ ದೆಹಲಿಯ ‘ಕ್ಯಾಥೆಡ್ರಲ್ ಚರ್ಚ್ ಆಫ್ ದಿ ರಿಡೆಂಪ್ಶನ್’ನಲ್ಲಿ ಆಯೋಜಿಸಲಾದ ಸಾಮೂಹಿಕ ಪ್ರಾರ್ಥನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದರು.
ಕಾರ್ಯಕ್ರಮದ ವೇಳೆ ದೆಹಲಿಯ ಬಿಷಪ್ ಡಾ. ಪಾಲ್ ಸ್ವರೂಪ್ ಅವರು ಪ್ರಧಾನ ಮಂತ್ರಿಯವರಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಶಾಂತಿ, ಸಹೋದರತ್ವ ಮತ್ತು ಸೌಹಾರ್ದತೆಯ ಸಂದೇಶವನ್ನು ಸಾರುವ ಈ ಪ್ರಾರ್ಥನಾ ಸಭೆಯಲ್ಲಿ ವಿವಿಧ ಗಣ್ಯರು ಭಾಗವಹಿಸಿದ್ದರು.
ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಎಕ್ಸ್ ಮೂಲಕ ವಿಡಿಯೋ ಸಂದೇಶ ಹಂಚಿಕೊಂಡು, “ಕ್ರಿಸ್ಮಸ್ ಹೊಸ ಭರವಸೆ ಮೂಡಿಸಲಿ, ಎಲ್ಲರಲ್ಲೂ ದಯಾಪರತೆ ಬೆಳೆಸಲಿ ಹಾಗೂ ಹಂಚಿಕೆಯ ಬದ್ಧತೆಯನ್ನು ಬಲಪಡಿಸಲಿ. ಕ್ಯಾಥೆಡ್ರಲ್ ಚರ್ಚ್ ಆಫ್ ದಿ ರಿಡೆಂಪ್ಶನ್ನಲ್ಲಿ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸಿದೆ” ಎಂದು ತಿಳಿಸಿದ್ದಾರೆ. ಕ್ರಿಸ್ಮಸ್ ಹಬ್ಬದ ಈ ಸಂದರ್ಭದಲ್ಲಿ ಪ್ರಧಾನಿ ಮೋದಿಯವರ ಉಪಸ್ಥಿತಿ ಪರಸ್ಪರ ಗೌರವ, ಏಕತೆ ಮತ್ತು ಶಾಂತಿಯ ಸಂದೇಶವನ್ನು ಮತ್ತೊಮ್ಮೆ ಬಲಪಡಿಸಿದೆ.

































