ಸುವರ್ಣಸೌಧ ಗಾಂಧಿ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಎಲ್ಲಾ ಪಕ್ಷದ ಶಾಸಕರ ಜತೆಗೆ ಸ್ವಾತಂತ್ರ್ಯ ಹೋರಾಟಗಾರರಿಗೂ ಆಹ್ವಾನ ನೀಡಲಾಗುವುದು. ಇದರ ಜವಾಬ್ದಾರಿಯನ್ನು ಜಿಲ್ಲಾಧಿಕಾರಿಗಳಿಗೆ ವಹಿಸಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಬೆಳಗಾವಿಯ ಸುವರ್ಣಸೌಧ ಗಾಂಧಿ ಪ್ರತಿಮೆ ಬಳಿ ಕಾರ್ಯಕ್ರಮ ನಡೆಯುವ ಸ್ಥಳ ಪರಿಶೀಲನೆ ನಡೆಸಿದ ಶಿವಕುಮಾರ್ ಅವರು ಶನಿವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.