ನವದೆಹಲಿ : ಜನಪ್ರಿಯ ರೇಡಿಯೋ ಜಾಕಿ ಸಿಮ್ರಾನ್ ಸಿಂಗ್ ಗುರುಗ್ರಾಮದ ಅಪಾರ್ಟ್ ಮೆಂಟ್ ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಇದು ಆತ್ಮಹತ್ಯೆ ಪ್ರಕರಣ ಎಂದು ಪೊಲೀಸರು ಶಂಕಿಸಿದ್ದಾರೆ.
ಸಿಮ್ರಾನ್ ಸಿಂಗ್ ಗುರುಗ್ರಾಮ್ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.ಮೇಲ್ನೋಟಕ್ಕೆ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ಹೇಳಿದ್ದಾರೆ.
ಮನೆಯನ್ನು ಒಳಗಿನಿಂದ ಲಾಕ್ ಮಾಡಲಾಗಿದ್ದು, ಮತ್ತು ಯಾವುದೇ ಡೆತ್ ನೋಟ್ ಸಿಕ್ಕಿಲ್ಲ. ತನಿಖೆಯ ನಂತರ ಶವವನ್ನು ಆಕೆಯ ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ.
ಇನ್ನು, ಆರ್ ಜೆ ಸಾವಿನ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದು, ಪೊಲೀಸರು ಆಕೆಯ ಇತ್ತೀಚಿನ ಸೋಶಿಯಲ್ ಮೀಡಿಯಾ ಪೋಸ್ಟ್ ಗಳನ್ನು ಪರಿಶೀಲಿಸುತ್ತಿದ್ದಾರೆ.