ಬೆಂಗಳೂರು : ಹೌದು ನಟಿ ರಮ್ಯಾಗೆ ಅಶ್ಲೀಲ ಮೆಸೇಜ್ ಮಾಡಿದ ಎ 1 ಆರೋಪಿ ಪ್ರಮೋದ್ ಗೌಡ (18) ನನ್ನು ಪೊಲೀಸರು ಬಂಧಿಸಿದ್ದಾರೆ.
ಕೆ ಆರ್ ಪುರಂ ಮೂಲದ ಪ್ರಮೋದ್ ಗೌಡನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಮೋದ್ ಗೌಡ ಸ್ನೇಹಿತನ ಮೊಬೈಲ್ ಬಳಸಿ ಅಶ್ಲೀಲವಾಗಿ ಕಮೆಂಟ್ ಮಾಡಿದ್ದನು.
ನಟಿ ರಮ್ಯಾಗೆ ಅಶ್ಲೀಲ ಮೆಸೇಜ್ ಮಾಡಿದ 48 ಕಿಡಿಗೇಡಿಗಳ ಐಪಿ ಅಡ್ರೆಸ್ ಪತ್ತೆ ಹಚ್ಚಿದ ಸಿಸಿಬಿ ಪೊಲೀಸರು 15 ಮಂದಿಯನ್ನು ಗುರುತಿಸಿದ್ದರು . ಹಾಗೂ 5 ಮಂದಿಯನ್ನು ಅರೆಸ್ಟ್ ಮಾಡಿದ್ದರು. ಕಮೆಂಟ್ ಮಾಡಿದವರಿಗೆ ಪೊಲೀಸರು ಖಡಕ್ ವಾರ್ನಿಂಗ್ ನೀಡಿದ್ದಾರೆ. ನಾರ್ಮಲ್ ಆಗಿ ಕಮೆಂಟ್ ಮಾಡಿದ್ದವರು, ಅರಿವಿಲ್ಲದೇ ಮೆಸೇಜ್ ಮಾಡಿದ್ದವರು ಕ್ಷಮೆ ಕೇಳಿದ್ದರು. ಇದೀಗ ಪ್ರಮುಖ ಆರೋಪಿಯ ಬಂಧನವಾಗಿದೆ.