ಬೆಂಗಳೂರು: ಹೌದು ಪದವಿ ಪೂರ್ಣಗೊಳಿಸಿದ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಪದವೀಧರ ಪ್ರಾಥಮಿಕ ಶಿಕ್ಷಕರ ಹುದ್ದೆಗೆ ಪದೋನ್ನತಿ ನೀಡಲು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರೊಂದಿಗೆ ಚರ್ಚಿಸಿದ ಬಳಿಕ ಅಂತಿಮ ನಿರ್ಧಾರ ಪ್ರಕಟಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಎಸ್. ಮಧು ಬಂಗಾರಪ್ಪ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಅಧ್ಯಕ್ಷತೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ವಿವಿಧ ಸಮಸ್ಯೆಗಳ ಬಗ್ಗೆ ಚರ್ಚಿಸಲು ನಡೆದ ಶಿಕ್ಷಕ ಮತ್ತು ಪದವೀಧರ ಕ್ಷೇತ್ರ ಪ್ರತಿನಿಧಿಸುವ ವಿಧಾನ ಪರಿಷತ್ ಸದಸ್ಯರ ಸಭೆಯಲ್ಲಿ ಅವರು ಮಾತನಾಡಿದರು.