ಚಿತ್ರದುರ್ಗ : ಕನ್ನಡ ರಾಜ್ಯೋತ್ಸವ ಕೇವಲ ನವೆಂಬರ್ ತಿಂಗಳಿಗಷ್ಟೆ ಸೀಮಿತವಾಗಿರಬಾರದು, ಪ್ರತಿಯೊಬ್ಬರ ದಿನ ನಿತ್ಯದ ಬದುಕಿನಲ್ಲಿ ಕನ್ನಡ ಬಳಕೆಯಾದಾಗ ಮಾತ್ರ ಕನ್ನಡ ರಾಜ್ಯೋತ್ಸವಕ್ಕೆ ನಿಜವಾದ ಗೌರವ ನೀಡಿದಂತಾಗುತ್ತದೆ ಎಂದು ನವ ಕ್ರಾಂತಿ ರಕ್ಷಣಾ ವೇದಿಕೆ ಸಂಸ್ಥಾಪಕ ರಾಜ್ಯಾಧ್ಯಕ್ಷ ಪ್ರದೀಪ್ಕುಮಾರ್ ತಿಳಿಸಿದರು.
ನವ ಕ್ರಾಂತಿ ರಕ್ಷಣಾ ವೇದಿಕೆ ಕಚೇರಿಯಲ್ಲಿ ಕನ್ನಡಾಂಭೆ ಹಾಗೂ ಸಂವಿದಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡುತ್ತ
ಕನ್ನಡ ನಾಡು, ನುಡಿ, ನೆಲ, ಜಲದ ಬಗ್ಗೆ ಎಲ್ಲರೂ ಅಭಿಮಾನ ಮೂಡಿಸಿಕೊಳ್ಳಬೇಕು. ಅದೇ ರೀತಿ ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ರವರ ಆಶಯದಂತೆ ಪ್ರತಿಯೊಬ್ಬರು ಶಿಕ್ಷಣವಂತರಾಗಬೇಕೆಂದು ಹೇಳಿದರು.
ನವ ಕ್ರಾಂತಿ ರಕ್ಷಣಾ ವೇದಿಕೆ ಗೌರವಾಧ್ಯಕ್ಷ ಮಹಾಂತೇಶ್, ಜಿಲ್ಲಾಧ್ಯಕ್ಷ ಮೋಹನ್, ಪ್ರಧಾನ ಕಾರ್ಯದರ್ಶಿ ವಿರೂಪಾಕ್ಷ, ಹನುಮಂತರಾಯ, ಬಾಗೋಡಿ ಸ್ವಾಮಿ
ನಗರಾಧ್ಯಕ್ಷ ಮಂಜುನಾಥ್ ಟಿ.ಎನ್. ಸತೀಶ್, ಶ್ರೀಧರ್, ಕಿರಣ್ಕುಮಾರ್, ವಿನಯ್ಕುಮಾರ್, ತಿಪ್ಪೇಶ್ ಹಾಗೂ ವೇದಿಕೆಯ ಪದಾಧಿಕಾರಿಗಳು ಈ ಸಂದರ್ಭದಲ್ಲಿ
ಉಪಸ್ಥಿತರಿದ್ದರು