ಚಿತ್ರದುರ್ಗ : ಚಿತ್ರದುರ್ಗ ಜಿಲ್ಲಾಮಟ್ಟದ ಅಲೆಮಾರಿ, ಅರೆ ಅಲೆಮಾರಿ ಜನಾಂಗದವರ ಸಲಹಾ ಸಮಿತಿ, ಪ್ರಗತಿ ಪರಿಶೀಲನಾ ಸಮಿತಿಗೆ ಅಲೆಮಾರಿ ಜನಾಂಗದ ಅಭಿವೃದ್ಧಿ ಸಂಸ್ಥೆ ಪ್ರತಿನಿಧಿಯಾಗಿ ಓ.ಪ್ರತಾಪ್ ಕುಮಾರ್ (ಪ್ರತಾಪ್ ಜೋಗಿ) ಅವರನ್ನು ನಾಮನಿರ್ದೇಶನ ಸದಸ್ಯರನ್ನಾಗಿ ಆಯ್ಕೆ ಮಾಡಲಾಗಿದೆ.
ಅಲೆಮಾರಿ ಜನಾಂಗದವರ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಹಾಗೂ ರಾಜಕೀಯ ಸಮಾನ ಅವಕಾಶ ಕಲ್ಪಿಸುವ ಬಗ್ಗೆ ಚಿತ್ರದುರ್ಗ ಜಿಲ್ಲಾಮಟ್ಟದ ಸಲಹಾ ಸಮಿತಿ ರಚಿಸಲಾಗಿದ್ದು, ಈ ಸಲಹಾ ಸಮಿತಿಗೆ ಅಲೆಮಾರಿ ಜನಾಂಗದ ಅಭಿವೃದ್ಧಿ ಸಂಸ್ಥೆ ಪ್ರತಿನಿಧಿಯಾಗಿ ಪ್ರತಾಪ್ ಜೋಗಿ ಅವರನ್ನು ನಾಮ ನಿರ್ದೇಶನ ಸದಸ್ಯರನ್ನಾಗಿ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಆಯ್ಕೆ ಮಾಡಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.