ಬೆಂಗಳೂರು: ನಾಡಹಬ್ಬ ದಸರಾ ಉದ್ಘಾಟಕರಾಗಿ ಲೇಖಕಿ ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿ ಹೈಕೋರ್ಟ್‌ಗೆ (High Court) ಸಲ್ಲಿಸಿದ್ದ ಪಿಐಎಲ್ ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿದೆ.
ಸರ್ಕಾರದ ಕ್ರಮ ಪ್ರಶ್ನಿಸಿ ಮಾಜಿ ಸಂಸದ ಪ್ರತಾಪ್ ಸಿಂಹ , ಗಿರೀಶ್ ಕುಮಾರ್ ಮತ್ತು ಗೌರವ್ ಎಂಬವರು ಪಿಐಎಲ್ ಸಲ್ಲಿಸಿದ್ದರು. ಈ ಅರ್ಜಿಗಳನ್ನು ಹೈಕೋರ್ಟ್ ಮುಖ್ಯ ನ್ಯಾ. ವಿಭು ಬಕ್ರು ಹಾಗೂ ನ್ಯಾ. ಸಿ.ಎಂ. ಜೋಶಿ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಬಳಿಕ ದಸರಾ ಉದ್ಛಾಟನೆಗೆ ಬಾನು ಮುಷ್ತಾಕ್ ಆಯ್ಕೆಯಿಂದ ಯಾವುದೇ ಹಕ್ಕು ಉಲ್ಲಂಘನೆಯಿಲ್ಲ ಎಂದು ಪಿಐಎಲ್ ಅರ್ಜಿಗಳನ್ನು ಪೀಠ ವಜಾಗೊಳಿಸಿತು. ವಿಜಯದಶಮಿ ಎಂದರೆ ಕೆಟ್ಟದರ ವಿರುದ್ಧ ಒಳ್ಳೆಯದರ ವಿಜಯ. ದೇಶಾದ್ಯಂತ ಈ ಹಬ್ಬವನ್ನು ಆಚರಿಸಲಾಗುತ್ತದೆ ಎಂದು ಪೀಠ ಈ ವೇಳೆ ಹೇಳಿದೆ.