ಚಿತ್ರದುರ್ಗ: ರಾಜ್ಯ ಸರ್ಕಾರಿ ನೌಕರರ ಸಂಘವು ಜಿಲ್ಲೆಯ ಎಸ್.ಎಸ್.ಎಲ್.ಸಿ. ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸಾಧನೆಗೈದ ನೌಕರರ ಮಕ್ಕಳಿಂದ ಪ್ರತಿಭಾ ಪುರಸ್ಕಾರಕ್ಕೆ ಆನ್‍ಲೈನ್‍ನಲ್ಲಿ ಅರ್ಜಿ ಆಹ್ವಾನಿಸಿದ್ದು, ಶೇ.90ಕ್ಕಿಂತ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳು ಮೇ.31ರೊಳಗೆ https:bit.ly/ksgeapp2023 ಲಿಂಕ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಟಿ.ತಿಮ್ಮಾರೆಡ್ಡಿ ತಿಳಿಸಿದ್ದಾರೆ.
ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳ ತಂದೆ ಅಥವಾ ತಾಯಿ ರಾಜ್ಯ ಸರ್ಕಾರದ ಯಾವುದಾದರೊಂದು ಇಲಾಖೆಯ ಖಾಯಂ ನೌಕರರಾಗಿರಬೇಕು. ನಿಗಮ ಮಂಡಳಿ, ಪ್ರಾಧಿಕಾರ, ಖಾಸಗಿ ಹಾಗೂ ಅನುದಾನಿತ ವಿದ್ಯಾಸಂಸ್ಥೆಗಳಲ್ಲಿ ನೇಮಕಗೊಂಡ ನೌಕರರ ಮಕ್ಕಳು ಅರ್ಜಿ ಸಲ್ಲಿಸುವಂತಿಲ್ಲ. ವಿದ್ಯಾಥಿಗಳು 2023ರ ಎಸ್.ಎಸ್.ಎಲ್.ಸಿ. ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲೇ ತೇರ್ಗಡೆಯಾಗಿರಬೇಕು.
ಆನ್‍ಲೈನ್ ಅರ್ಜಿ ಸಲ್ಲಿಸುವಾಗ ದೃಢೀಕೃತ ಅಂಕಪಟ್ಟಿ, ಪಾಸ್‍ಪೋರ್ಟ್ ಅಳತೆಯ ಭಾವಚಿತ್ರ ಅಪ್‍ಲೋಡ್ ಮಾಡಬೇಕು. ನೌಕರರ ಸೇವಾ ದೃಢೀಕರಣ ಪತ್ರಕ್ಕೆ ಸಂಘದ ಜಿಲ್ಲಾ ಅಥವಾ ತಾಲ್ಲೂಕು ಯೋಜನಾ ಶಾಖೆಯ ಅಧ್ಯಕ್ಷರ ದೃಢೀಕರಣ ಕಡ್ಡಾಯ ಎಂದು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಘಟಕ ಅಧ್ಯಕ್ಷ ಕೆ.ಟಿ.ತಿಮ್ಮಾರೆಡ್ಡಿ-9449169440, ಜಿಲ್ಲಾ ಕಾರ್ಯದರ್ಶಿ ಮಂಜುನಾಥ ಎಸ್.ಕೆ-9844412448, ಜಿಲ್ಲಾ ಖಜಾಂಚಿ ವೀರೇಶ್ ಬಿ-9880409874, ರಾಜ್ಯ ಪರಿಷತ್ ಸದಸ್ಯ ಬಾಗೇಶ್ ಉಗ್ರಾಣ-9916079290 ಹಾಗೂ ಸಂಘದ ತಾಲ್ಲೂಕು ಅಧ್ಯಕ್ಷರು ಹಾಗೂ ತಮ್ಮ ಇಲಾಖೆಯ ಸಂಘದ ನಿರ್ದೇಶಕರನ್ನು ಸಂಪರ್ಕಿಸಬಹುದು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಟಿ.ತಿಮ್ಮಾರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.