ಬೆಂಗಳೂರು: ರಾಜ್ಯದಲ್ಲಿ ಏ.29ರವರೆಗೆ ಹಾಗೂ ಬೆಂಗಳೂರಿನಲ್ಲಿ ಮೇ 5ರವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಸದ್ಯ ರಾಜ್ಯದ ಜನರು ಬಿಸಿಲ ಬೇಗೆಯಿಂದ ಬಳಲುತ್ತಿದ್ದಾರೆ. ಈ ನಡುವೆ ಕರಾವಳಿ, ದಕ್ಷಿಣ ಕನ್ನಡ, ಉತ್ತರ ಕರ್ನಾಟಕ ಹಾಗೂ ದಕ್ಷಿಣ ಒಳನಾಡಿನಲ್ಲಿ ಏ.29ರವರೆಗೆ ಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.
ಇದರ ನಡುವೆ ಬಿಸಿಲಿನಿಂದ ಬಳಲುತ್ತಿರುವ ರಾಜ್ಯ ರಾಜಧಾನಿಯ ಜನರಿಗೂ ತಂಪಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಏ.28ರಿಂದ ಮೇ 5ರವರೆಗೆ ಭಾರೀ ಗಾಳಿ, ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.
































