ಆಸ್ಪತ್ರೆಗೆ ತಪಾಸಣೆಗಾಗಿ ಬಂದಿದ್ದ ಒಂದೂವರೆ ತಿಂಗಳ ಗರ್ಭಿಣಿ ಮೃತಪಟ್ಟ ಘಟನೆ ಸೋಮವಾರ ಸಂಭವಿಸಿದೆ.
2020ರಲ್ಲಿ ಎಂಸಿಎ ಪದವಿಯಲ್ಲಿ ಚಿನ್ನದ ಪದಕ ಪಡೆದಿದ್ದ ಹೊಸನಗರ ತಾಲೂಕಿನ ನಗರ ಹೋಬಳಿ ದುಬ್ಬಾರತಟ್ಟಿಯ ಅಶ್ವಿನಿ (25) ಮೃತಪಟ್ಟವರು. ತಪಾಸಣೆ ನಡೆಸಿದ ವೈದ್ಯರು, ಮಗುವಿನ ಬೆಳವಣಿಗೆ ಸಮರ್ಪಕವಾಗಿ ಇಲ್ಲದ್ದನ್ನು ಆಸ್ಪತ್ರೆಗೆ ಕಳುಹಿಸಲಾಗಿತ್ತು.ಅಶ್ವಿನಿಗೆ ಚಿಕಿತ್ಸೆ ಮಾಡುವುದು ಕ್ಲಿಷ್ಟಕರ ಎಂದು ಗೊತ್ತಾಗುತ್ತಿದ್ದಂತೆ ಸಾಗರ ತಾಲೂಕು ಸರ್ಕಾರಿ ವೈದ್ಯರಿಂದ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲು ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲು ತಂದಾಗ ಅಶ್ವಿನಿ ಸಾವನ್ನಪ್ಪಿರುವ ಬಗ್ಗೆ ವೈದ್ಯರ ದೃಢೀಕರಣ ಮಾಡಿದ್ದಾರೆ. ಆಸ್ಪತ್ರೆಯಲ್ಲಿ ಸರಿಯಾದ ಚಿಕಿತ್ಸೆ ಸಿಗದೆ ಮೃತಪಟ್ಟಿದ್ದಾಳೆ ಎಂದು ಅಶ್ವಿನಿ ಕುಟುಂಬಸ್ಥರು ಆರೋಪಿಸಿದ್ದಾರೆ. ಆದರೆ ಹೃದಯಾಘಾತದಿಂದಲೇ ಅಶ್ವಿನಿ ಮೃತಪಟ್ಟಿದ್ದಾರೆ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ
ಕೇವಲ ಒಂದುವರೆ ವರ್ಷದ ಹಿಂದೆ ಮದುವೆಯಾಗಿದ್ದ ಅಶ್ವಿನಿ, ಹೊಸನಗರ ತಾಲೂಕಿನ ನಗರ ಪಟ್ಟಣದಲ್ಲಿ ಕೋಳಿ ಫಾರಂ ನಡೆಸುತ್ತಿರುವ ಪ್ರಕಾಶ್ ಎಂಬುವವರನ್ನು ಮದುವೆಯಾಗಿದ್ದರು. ಶಿವಮೊಗ್ಗದ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಅಶ್ವಿನಿ ಶವದ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.
				
															
                    
                    
                    
                    
                    































