ನವದೆಹಲಿ : ಸಂಸತ್ತಿನ ಉಭಯ ಸದನಗಳಲ್ಲಿ ಅಂಗೀಕಾರವಾಗಿದ್ದ ಆನ್‌ಲೈನ್ ಗೇಮ್‌ಗಳನ್ನು ನಿಷೇಧಿಸುವ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಶುಕ್ರವಾರ ಅನುಮೋದಿಸಿದ್ದಾರೆ.
ಹಣ ಕಟ್ಟಿ ಆಡಲಾಗುವ ಎಲ್ಲಾ ಆನ್‌ಲೈನ್ ಗೇಮ್‌ಗಳನ್ನು ಕಾನೂನು ನಿಷೇಧಿಸುತ್ತದೆ. ಆನ್‌ಲೈನ್ ಗೇಮ್ ಆಡುವುದಕ್ಕೆ ಅವಕಾಶ ಹಾಗೂ ಪ್ರೋತ್ಸಾಹ ನೀಡುವವರಿಗೆ 3 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 1 ಕೋಟಿಯವರೆಗೆ ದಂಡ ವಿಧಿಸಲಾಗುವುದು
ಅಂತಹ ಆಟಗಳ ಕುರಿತು ಜಾಹೀರಾತು ಪ್ರಕಟಿಸಿದರೆ ಎರಡು ವರ್ಷಗಳವರೆಗೆ ಶಿಕ್ಷೆ ಮತ್ತು 50 ಲಕ್ಷ ದಂಡ ವಿಧಿಸಬಹುದಾಗಿದೆ. ಅಪರಾಧಗಳ ಪುನರಾವರ್ತನೆ ಕಂಡುಬಂದಲ್ಲಿ 3-5 ವರ್ಷ ಜೈಲು ಮತ್ತು 2 ಕೋಟಿ ವರೆಗೆ ದಂಡ ವಿಧಿಸಬಹುದಾಗಿದೆ.
ಆನ್‌ಲೈನ್ ಗೇಮ್ ಒಂದು ವ್ಯಸನವಾಗಿ ಮಾರ್ಪಟ್ಟಿದೆ. ಇದಕ್ಕೆ ಮಾರುಹೋಗುವವರ ಸಂಖ್ಯೆಯೂ ಹೆಚ್ಚುತ್ತಿದೆ. ಈ ಗೇಮಿಂಗ್ ಆಪ್‌ಗಳ ಮೂಲಕ ಹಣ ಅಕ್ರಮ ವರ್ಗಾವಣೆ ಆಗುತ್ತಿದೆ. ಅಲ್ಲದೇ, ಹಣಕಾಸು ವಂಚನೆ ಪ್ರಕರಣಗಳು ಹೆಚ್ಚುತ್ತಿವೆ. ಇದಕ್ಕೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಈ ಮಸೂದೆ ರೂಪಿಸಿದೆ.