ಭುವನೇಶ್ವರ್ : ಪ್ರಧಾನಿ ನರೇಂದ್ರ ಮೋದಿಯವರು ಒಡಿಶಾದ ಜಾರ್ಸುಗುಡದಲ್ಲಿ 60,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ.
ದೂರಸಂಪರ್ಕ, ರೈಲ್ವೆ, ಉನ್ನತ ಶಿಕ್ಷಣ, ಆರೋಗ್ಯ, ಕೌಶಲ್ಯ ಅಭಿವೃದ್ಧಿ, ಗ್ರಾಮೀಣ ವಸತಿ ಕ್ಷೇತ್ರಗಳು ಸೇರಿದಂತೆ ಇತರ ಕ್ಷೇತ್ರಗಳಿಗೆ ಸಂಬಧಿಸಿದ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿಗಳು ಉದ್ಘಾಟಿಸಿದ ಹಾಗೂ ಶಂಕುಸ್ಥಾಪನೆ ನೆರವೇರಿಸಿದರು. ಸ್ವದೇಶಿ ತಂತ್ರಜ್ಞಾನದೊಂದಿಗೆ ಸುಮಾರು 37,000 ಕೋಟಿ ರೂ. ವೆಚ್ಚದ 97,500 4ಜಿ ಮೊಬೈಲ್ ಟವರ್ಗಳನ್ನು ಉದ್ಘಾಟಿಸಿದ್ದು, ಇದರಲ್ಲಿ ಆಂಧ್ರಪ್ರದೇಶಕ್ಕೆ ಸೇರಿದ ಹೊಸ ಬಿಎಸ್ಎನ್ಎಲ್ನ ಟವರ್ಗಳು ಸಹ ಸೇರಿವೆ.
ಡಿಜಿಟಲ್ ಭಾರತ್ ನಿಧಿಯಡಿಯಲ್ಲಿ 18,900 ಕ್ಕೂ ಹೆಚ್ಚು 4ಜಿ ಸೈಟ್ಗಳಿಗೆ ಹಣಕಾಸಿನ ನೆರವು ನೀಡಲಾಗಿದೆ. ಇದರಿಂದ ಸುಮಾರು 26,700 ಸಂಪರ್ಕವಿಲ್ಲದ ಹಳ್ಳಿಗಳಿಗೆ ಸಂಪರ್ಕ ಸಾಧಿಸಲು ಅನುಕೂಲವಾಗುತ್ತದೆ. 20 ಲಕ್ಷಕ್ಕೂ ಹೆಚ್ಚು ಬಳಕೆದಾರರಿಗೆ ಇದರಿಂದ ಉಪಯೋಗ ಪಡೆದುಕೊಳ್ಳಲಿದ್ದಾರೆ. ಈ ಟವರ್ಗಳು ಸೌರಶಕ್ತಿ ಚಾಲಿತವಾಗಿದೆ.
ಸಂಬಲ್ಪುರ-ಸರ್ಲಾದಲ್ಲಿ ರೈಲು ಮೇಲ್ಸೇತುವೆಗೆ ಶಂಕು ಸ್ಥಾಪನೆ ನೆರವೇರಿಸಿದರು. ಈ ಯೋಜನೆಗಳು ಒಡಿಶಾ ಮತ್ತು ನೆರೆಯ ರಾಜ್ಯಗಳಿಗೆ ಸರಕು ಸಾಗಾಟ ಮತ್ತು ಪ್ರಯಾಣಿಕರ ಸಂಚಾರ ಸುಗಮಗೊಳಿಸುತ್ತದೆ. ಸ್ಥಳೀಯ ಕೈಗಾರಿಕೆಗಳು ಮತ್ತು ವ್ಯಾಪಾರ ಅಭಿವೃದ್ಧಿ ಹೊಂದಲಿದೆ.
ಬೆರ್ಹಾಂಪುರ ಮತ್ತು ಉಧ್ನಾ (ಸೂರತ್) ನಡುವಿನ ಅಮೃತ್ ಭಾರತ್ ಎಕ್ಸ್ಪ್ರೆಸ್ಗೆ ಮೋದಿ ಚಾಲನೆ ನೀಡಲಿದ್ದಾರೆ. ಇನ್ನು ರಾಜ್ಯದಲ್ಲಿ ಡಿಜಿಟಲ್ ಶಿಕ್ಷಣವನ್ನು ಹೆಚ್ಚಿಸಲು, ಪ್ರಧಾನಿ ಮೋದಿ 130 ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ವೈ-ಫೈ ಸೌಲಭ್ಯಗಕ್ಕೆ ಚಾಲನೆ ನೀಡಲಿದ್ದಾರೆ.