ಪ್ರಯಾಗ್ರಾಜ್: ಮಹಾಕುಂಭಮೇಳದಲ್ಲಿ ಮೌನಿ ಅಮವಾಸ್ಯೆ ಪ್ರಯುಕ್ತ ಕೋಟ್ಯಾಂತರ ಭಕ್ತರು ಸೇರಿದ್ದಾರೆ. ಈ ನಡುವೆ ನಿನ್ನೆ ಮಂಗಳವಾರ ರಾತ್ರಿ ಕಾಲ್ತುಳಿತ ಸಂಭವಿಸಿದೆ.
ಘಟನೆಯಲ್ಲಿ 15ಕ್ಕೂ ಹೆಚ್ಚು ಸಾವುಗಳು ಸಂಭವಿಸಿವೆ ಎನ್ನಲಾಗಿದೆ. ಘಟನೆ ಕುರಿತು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ.
ಒಂದೇ ಗಂಟೆಯಲ್ಲಿ 2 ಬಾರಿ ಕರೆ ಮಾಡಿ ಘಟನೆಯ ಎಲ್ಲ ಮಾಹಿತಿ ಪಡೆದಿದ್ದಾರೆ. ಮತ್ತು ಎಲ್ಲ ರೀತಿಯ ಅಗತ್ಯ ರಕ್ಷಣಾ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದ್ದಾರೆ.