ತುಮಕೂರು: ಮೋದಿ ಸರ್ಕಾರ ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಿಸಿದೆ. ಗ್ಯಾಸ್ ಸಿಲಿಂಡರ್ ಬೆಲೆಯನ್ನು ಏರಿಕೆ ಮಾಡಿದೆ. ಇದನ್ನು ನಾವು ಅಚ್ಚೆ ದಿನ್ ಎಂದು ಕರೆಯಬೇಕಾ? ಎಂದು CM ಸಿದ್ದರಾಮಯ್ಯ ಗುಡುಗಿದ್ದಾರೆ.
ತುಮಕೂರಿನಲ್ಲಿ ನಡೆದ ಸರ್ಕಾರ ಸಾಧನಾ ಸಮಾವೇಶದಲ್ಲಿ ಮಾತನಾಡಿದ ಅವರು, ಮನಮೋಹನ್ ಸಿಂಗ್ ಸರ್ಕಾರದಲ್ಲಿ ಬೆಲೆ ಎಷ್ಟಿತ್ತು? ಈಗ ಸಿಲಿಂಡರ್ ಪೆಟ್ರೋಲ್-ಡೀಸೆಲ್ ಬೆಲೆ ಎಷ್ಟಿದೆ? ಇವತ್ತು ದೇಶದಲ್ಲಿ ಬೆಲೆ ಏರಿಕೆಗೆ ಪ್ರಧಾನಿ ಮೋದಿ ನೇರ ಕಾರಣ ಎಂದು ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
































