ವಾಷಿಂಗ್ಟನ್: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಅಮೆರಿಕ ಪ್ರವಾಸದ ಮೊದಲ ದಿನದಲ್ಲಿ, ಹೊಸದಾಗಿ ಆಯ್ಕೆಯಾದ ಅಮೆರಿಕದ ರಾಷ್ಟ್ರೀಯ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್ ಅವರನ್ನು ಭೇಟಿಯಾದರು.
ಬುಧವಾರ ಬೆಳಗ್ಗೆ ವಾಷಿಂಗ್ಟನ್ ಡಿಸಿಗೆ ಬಂದ ಪ್ರಧಾನಿ, ಅವರು ಗುಪ್ತಚರ ಕ್ಷೇತ್ರದಲ್ಲಿ ಅಮೇರಿಕಾದ ಪ್ರಮುಖ ನಾಯಕಿಯಾಗಿ ನೇಮಕಗೊಂಡ ತುಳಸಿ ಗಬ್ಬಾರ್ಡ್ ಅವರಿಗೆ ಅಭಿನಂದನೆ ಸಲ್ಲಿಸಿದರು. ಪ್ರಧಾನಿ ಮೋದಿ, ತಮ್ಮ ಎಕ್ಸ್ಖಾತೆಯಲ್ಲಿ, ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್ ಅವರೊಂದಿಗೆ ಭಾರತದ-ಅಮೆರಿಕದ ಸಂಬಂಧದ ಬಗ್ಗೆ ಚರ್ಚೆ ಮಾಡಿದೆ. ಭಾರತ-ಯುಎಸ್ ಸ್ನೇಹ ಸದಾ ಬಲವತ್ತಾಗುತ್ತಿದೆ,” ಎಂದು ಮಾಹಿತಿ ಹಂಚಿಕೊಂಡಿದ್ದಾರೆ.
ಅಮೆರಿಕ ಪ್ರವಾಸದ ಸಂದರ್ಭದಲ್ಲಿ, ಭಾರತದ ಅನಿವಾಸಿ ಸಮುದಾಯವು ಮೋದಿ ಅವರಿಗೆ ಅದ್ದೂರಿ ಸ್ವಾಗತವನ್ನು ನೀಡಿತು. “ಚಳಿಗಾಲದ ಚಳಿಯಲ್ಲಿ ಬೆಚ್ಚಗಿನ ಸ್ವಾಗತ, ಶೀತ ಹವಾಮಾನದ ಹೊರತಾಗಿಯೂ, ವಾಷಿಂಗ್ಟನ್ ಡಿಸಿಯಲ್ಲಿರುವ ಭಾರತೀಯ ವಲಸಿಗರು ನನ್ನನ್ನು ವಿಶೇಷ ಸ್ವಾಗತದೊಂದಿಗೆ ಬರಮಾಡಿಕೊಂಡಿದ್ದಾರೆ. ಅವರಿಗೆ ನನ್ನ ಕೃತಜ್ಞತೆಗಳು,” ಎಂದು ಮೋದಿ ಅವರು ಎಕ್ಸ್ನಲ್ಲಿ ಬರೆದಿದ್ದಾರೆ. ಈ ಪ್ರವಾಸವು, ಭಾರತ-ಅಮೆರಿಕ ನಡುವೆ ಆಳವಾದ ಸ್ನೇಹ ಸಂಬಂಧಗಳನ್ನು ಮತ್ತಷ್ಟು ಬಲಪಡಿಸಲು ಸಹಕಾರಿಯಾಗಲಿದೆ ಎಂದು ಹೇಳಲಾಗಿದೆ.