ನವದೆಹಲಿ: ಮಾ.11 ಮತ್ತು ಮಾ.12ರಂದು ಪ್ರಧಾನಿ ನರೇಂದ್ರ ಮೋದಿ ಅವರು ಮಾರಿಷಸ್ ಪ್ರವಾಸ ಕೈಗೊಳ್ಳಲಿದ್ದಾರೆ.ಮಾರಿಷಸ್ನ ರಾಷ್ಟ್ರೀಯ ದಿನಾಚರಣೆಯಲ್ಲಿ ಮೋದಿ ಅವರು ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ಮಾರಿಷಸ್ ಪ್ರಧಾನಿ ನವೀನ್ ರಾಮ್ಗೂಲಂ ತಿಳಿಸಿದ್ದಾರೆ.
ಶುಕ್ರವಾರ ಸದನವನ್ನುದ್ದೇಶಿಸಿ ಮಾತನಾಡಿದ ನವೀನ್ ರಾಮ್ಗೂಲಂ, ನಮ್ಮ ದೇಶದ ಸ್ವಾತಂತ್ರ್ಯದ 57ನೇ ವಾರ್ಷಿಕೋತ್ಸವದ ಆಚರಣೆಯ ಸಂದರ್ಭದಲ್ಲಿ, ಸದನಕ್ಕೆ ಒಂದು ವಿಷಯ ತಿಳಿಸಲು ನನಗೆ ತುಂಬಾ ಸಂತೋಷವಾಗಿದೆ. ನಮ್ಮ ಆಹ್ವಾನದ ಮೇರೆಗೆ ರಾಷ್ಟ್ರೀಯ ದಿನಾಚರಣೆಯಲ್ಲಿ ಗೌರವಾನ್ವಿತ ಅತಿಥಿಯಾಗಿ ಪಾಲ್ಗೊಳ್ಳಲು ಭಾರತದ ಪ್ರಧಾನಿ ಮೋದಿ ಅವರು ಒಪ್ಪಿದ್ದಾರೆ. ಇದು ಉಭಯ ದೇಶಗಳ ದ್ವಿಪಕ್ಷೀಯ ಬಾಂಧವ್ಯಕ್ಕೆ ಸಾಕ್ಷಿಯಾಗಲಿದೆ ಎಂದು ಹೇಳಿದ್ದಾರೆ.
ಮಾರಿಷತ್ ಪ್ರತಿ ವರ್ಷ ಮಾರ್ಚ್ 12ರಂದು ರಾಷ್ಟ್ರೀಯ ದಿನವನ್ನಾಗಿ ಆಚರಣೆ ಮಾಡುತ್ತದೆ.