ಪೋರ್ಟ್ ಲೂಯಿಸ್ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಾರಿಷಸ್‌ಗೆ ಎರಡು ದಿನಗಳ ಪ್ರವಾಸ ಕೈಗೊಂಡಿದ್ದಾರೆ.
ಈ ಸಂದರ್ಭದಲ್ಲಿ ಅವರು ಸಾಮರ್ಥ್ಯ ವೃದ್ಧಿಯಿಂದ ಹಿಡಿದು ಸಮುದಾಯ ಸಂಬಂಧಿತ ಮೂಲಸೌಕರ್ಯ ದವರೆಗೆ ಭಾರತ ಅನುದಾನಿತ 20ಕ್ಕೂ ಹೆಚ್ಚು ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆಗ್ನೇಯ ಆಫ್ರಿಕಾದ ದ್ವೀಪ ರಾಷ್ಟ್ರದಲ್ಲಿ ಪ್ರಜಾಪ್ರಭುತ್ವವನ್ನು ಬಲಪಡಿಸುವ ಗುರಿಯನ್ನು ಹೊಂದಿರುವ ಹೊಸ ಪ್ರಮುಖ ಮೂಲಸೌಕರ್ಯ ಯೋಜನೆಗಳನ್ನು ಪ್ರಧಾನಿ ಘೋಷಿಸಲಿದ್ದಾರೆ.
ಪ್ರಧಾನಿ ಮೋದಿ,ಮಾರಿಷಸನ ತಮ್ಮ ಪ್ರಧಾನಿ ನವೀನ್ ರಾಮ್ಗೂಲಮ್ ಅವರೊಂ ದಿಗೆ ನಾಗರಿಕ ಸೇವಾ ಕಾಲೇ ಜು ಕಟ್ಟಡವನ್ನು ಜಂಟಿಯಾಗಿ ಉದ್ಘಾಟಿಸಲಿದ್ದಾರೆ.
ತಡರಾತ್ರಿ ಮಾರಿಷಸ್ಗೆ ತೆರಳಿರುವ ಪ್ರಧಾನಿ ಮೋದಿ, ಈ ಭೇಟಿಯು ಉಭಯ ರಾಷ್ಟ್ರ ಗಳ ನಡುವಿನ ಸಂಬಂಧಗಳಲ್ಲಿ ಹೊಸ ಮತ್ತು ಪ್ರಕಾಶಮಾನವಾದ ಅಧ್ಯಾಯವನ್ನು ತೆರೆಯುತ್ತದೆ ಎಂದು ಹೇಳಿದ್ದಾರೆ.