ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಪ್ರಚಾರಕ್ಕಾಗಿ ಮತ್ತೊಮ್ಮೆ ರಾಜ್ಯಕ್ಕೆ ಆಗಮಿಸಲಿದ್ದಾರೆ ಎಂದು ತಿಳಿದುಬಂದಿದೆ.
ಜೊತೆಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಕೂಡ ಈ ಬಾರಿ ರಾಜ್ಯದಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿಕೊಳ್ಳಲಿದ್ದಾರೆ.!
ಮೇ 4ರಂದು ಕರಾವಳಿ ಜಿಲ್ಲೆ ಉಡುಪಿಯಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರ ಬೃಹತ್ ಸಮಾವೇಶ ನಡೆಯಲಿದ್ದು ಮೋದಿ ಭಾಗವಹಿಸಲಿದ್ದಾರೆ. ಯೋಗಿ ಆದಿತ್ಯನಾಥ ಅವರು ಪ್ರಧಾನಿಗೆ ಸಾಥ್ ನೀಡಲಿದ್ದಾರೆ ಎಂಬುದು ಸುದ್ದಿ.!