ಮಂಗಳೂರು: ಉಡುಪಿ ಶ್ರೀಕೃಷ್ಣ ಮಠದಲ್ಲಿ ಶುಕ್ರವಾರ (ನ.28) ನಡೆಯುವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರಮೋದಿ ಪಾಲ್ಗೊಳ್ಳುವರು.
ಶುಕ್ರವಾರ ಬೆಳಿಗ್ಗೆ 8.15ಕ್ಕೆ ನವದೆಹಲಿಯಿಂದ ಹೊರಡುವ ಪ್ರಧಾನಿ 11.05ಕ್ಕೆ ಮಂಗಳೂರು ವಿಮಾನ ನಿಲ್ದಾಣ ತಲುಪಲಿದ್ದಾರೆ. ನಂತರ ಹೆಲಿಕಾಪ್ಟರ್‌ನಲ್ಲಿ ಉಡುಪಿಗೆ ತೆರಳುವರು. ಅಲ್ಲಿನ ಕಾರ್ಯಕ್ರಮ ಮುಗಿಸಿ, ಮಧ್ಯಾಹ್ನ 2.10ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದು, ಗೋವಾಕ್ಕೆ ತೆರಳಲಿದ್ದಾರೆ.
ನರೇಂದ್ರ ಮೋದಿ ಉಡುಪಿಯಲ್ಲಿ ರೋಡ್‌ಶೋ ನಡೆಸಲಿರುವ ಪ್ರಧಾನಿ, ನಂತರ ಕೃಷ್ಣಮಠಕ್ಕೆ ತೆರಳುವರು. ಕನಕನ ಕಿಂಡಿಗೆ ಹೊದಿಸಿರುವ ಚಿನ್ನದ ಕವಚ, ಸುವರ್ಣ ತೀರ್ಥ ಮಂಟಪ ಅನಾವರಣಗೊಳಿಸುವರು.






























