ಇಸ್ಲಾಮಾಬಾದ್ : ಭಾರತದ ವಿರುದ್ಧ ದಾಳಿಗೆ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಶರೀಫ್ ಸೇನೆಗೆ ಪರಮಾಧಿಕಾರ ನೀಡಿದ್ದಾರೆ ಎಂದು ವರದಿಯಾಗಿದೆ.
ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರ್ ಬೆನ್ನಲ್ಲೇ ಪ್ರಧಾನಿ ಶೆಹಬಾಜ್ ಶರೀಫ್ ಅವರು ಇಂದು ಮಧ್ಯಾಹ್ನದ ಬಳಿಕ ಪಾಕಿಸ್ತಾನದ ರಾಷ್ಟ್ರೀಯ ಭದ್ರತಾ ಸಮಿತಿಯ ಸಭೆ ಕರೆದಿದ್ದು, ಭಾರತದ ಪ್ರತೀಕಾರದ ದಾಳಿಯನ್ನ ತೀವ್ರವಾಗಿ ಖಂಡಿಸಿದ್ದಾರೆ. ಅಪ್ರಚೋದಿತ ಮತ್ತು ಕಾನೂನುಬಾಹಿರ ಯುದ್ಧ ಕೃತ್ಯ ಎಂದಿದ್ದಾರೆ.
ಆಪರೇಷನ್ ಸಿಂಧೂರ್ ಬೆನ್ನಲ್ಲೇ ಯೂಟರ್ನ್ ಹೊಡೆದ ಪಾಕ್ ರಕ್ಷಣಾ ಸಚಿವ
ಭಾರತ ದಾಳಿ ಮಾಡಿದರೆ ಮಾತ್ರ ಪಾಕಿಸ್ತಾನ ಪ್ರತಿಕ್ರಿಯಿಸುತ್ತದೆ. ಕಳೆದ ಹದಿನೈದು ದಿನಗಳಿಂದ ನಾವು ಭಾರತದ ವಿರುದ್ಧ ಯಾವುದೇ ಬಗೆಯ ಕ್ರಮಕೈಗೊಳ್ಳುವುದಿಲ್ಲ ಎಂದು ಹೇಳುತ್ತಿದ್ದೇವೆ. ಆದರೆ ನಮ್ಮ ಮೇಲೆ ದಾಳಿ ನಡೆದರೆ, ನಾವು ಪ್ರತಿದಾಳಿ ಮಾಡುತ್ತೇವೆ. ಇನ್ನು ಒಂದು ವೇಳೆ ಭಾರತ ಹಿಂದೆ ಸರಿದರೆ ನಾವು ಸಹ ಖಂಡಿತವಾಗಿಯೂ ಈ ಉದ್ವಿಗ್ನತೆಯನ್ನು ಶಮನಗೊಳಿಸಲು ಸಿದ್ಧ. ಎಂದು ಪಾಕ್ ರಕ್ಷಣಾ ಸಚಿವ ಖವಾಜಾ ಆಸಿಫ್ ಯೂಟರ್ನ್ ಹೊಡೆದಿದ್ದಾರೆ.
ಭಾರತದ ಕ್ಷಿಪಣಿ ದಾಳಿಯಲ್ಲಿ ಜೈಶ್ ಮುಖ್ಯಸ್ಥನ ಕುಟುಂಬದ 10 ಜನ, 4 ಸಹಚರರು ಸಾವು
ಪಾಕಿಸ್ತಾನದ ಬಹವಾಲ್ಪುರದಲ್ಲಿ ನಡೆದ ಭಾರತದ ವೈಮಾನಿಕ ದಾಳಿಯಲ್ಲಿ ತನ್ನ ಕುಟುಂಬದ 10 ಸದಸ್ಯರು ಮತ್ತು ನಾಲ್ವರು ಸಹಚರರು ಸಾವನ್ನಪ್ಪಿದ್ದಾರೆ ಎಂದು ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಹೇಳಿರುವುದಾಗಿ ವರದಿಯಾಗಿದೆ.
ಭಾರತದ ದಾಳಿಯಲ್ಲಿ ಮೃತಪಟ್ಟವರಲ್ಲಿ ಜೈಶ್ ಸಂಘಟನೆಯ ಮುಖ್ಯಸ್ಥ ಅಜರ್‌ನ ಅಕ್ಕ ಮತ್ತು ಆಕೆಯ ಪತಿ, ಅವರ ಸೋದರಳಿಯ ಮತ್ತು ಅವರ ಪತ್ನಿ, ಮತ್ತೊಬ್ಬ ಸೊಸೆ ಮತ್ತು ಅವರ ಕುಟುಂಬದ 5 ಮಕ್ಕಳು ಸೇರಿದ್ದಾರೆ. ಅಜರ್ ಮತ್ತು ಅವರ ತಾಯಿಯ ಆಪ್ತ ಸಹಾಯಕ ಮತ್ತು ಇತರ ಇಬ್ಬರು ಆಪ್ತ ಸಹಚರರು ಸಹ ಭಾರತೀಯ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.