ರಾಜಸ್ಥಾನ : ಜೈಸಲ್ಮೇರ್‌ನಿಂದ ಜೋಧ್‌ಪುರಕ್ಕೆ ಹೋಗುತ್ತಿದ್ದ ಖಾಸಗಿ ಬಸ್ ಹಠಾತ್ತನೆ ಹೊತ್ತಿ ಉರಿದ ಪರಿಣಾಮ ಇಪ್ಪತ್ತು ಜನರು ಸಜೀವ ದಹನವಾಗಿದ್ದು, 16 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಘಟನೆಯಲ್ಲಿ ಮೃತಪಟ್ಟವರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಸಾವಿನ ಬಗ್ಗೆ ದುಃಖ ವ್ಯಕ್ತಪಡಿಸಿದ್ದು, ಮೃತರ ಹತ್ತಿರದ ಸಂಬಂಧಿಕರಿಗೆ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.