ಬೆಂಗಳೂರು : ಕನ್ನಡಿಗರ ಋಣ ತೀರಿಸಲು ನಿರ್ಮಲಾ ಸೀತಾರಾಮನ್ ವಿಶೇಷ ಪ್ಯಾಕೇಜ್ ಘೋಷಣೆ ಮಾಡಲಿ. ಇದು ಕೇಂದ್ರ ಬಜೆಟ್ ಅಲ್ಲ. ಬಿಹಾರ ಬಜೆಟ್, ಈ ಬಿಹಾರ ಬಜೆಟ್ ಕನ್ನಡಿಗರಿಗೆ ಅನ್ಯಾಯ ಮಾಡಿದೆ ಎಂದು ಕೇಂದ್ರ ಬಜೆಟ್ ಮಂಡನೆ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.
ಕೇಂದ್ರ ಬಜೆಟ್ ಮಂಡನೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ನಾವೇನೂ ಮೊಸರಲ್ಲಿ ಕಲ್ಲು ಹುಡುಕುತ್ತಿಲ್ಲ. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರೇ ರಾಜ್ಯಕ್ಕೆ ಸಮರ್ಪಕ ತೆರಿಗೆ ಪರಿಹಾರ ಕೊಟ್ಟಿಲ್ಲ. ಬೊಮ್ಮಾಯಿ ಸಿಎಂ ಆಗಿದ್ದಾಗ ದೆಹಲಿಗೆ ಹೋಗಿ ತೆರಿಗೆ ಪರಿಹಾರ ಕೇಳಬೇಕು ಅಂದಿದ್ದರು. ಅಂಕಿ ಅಂಶ ಇಟ್ಟು ನಾವು ಕೇಂದ್ರದಿಂದ ತೆರಿಗೆ ಪರಿಹಾರ, ಅನುದಾನ ಕೇಳ್ತಿದ್ದೇವೆ. ಉದ್ಯೋಗ ಸೃಷ್ಟಿಸುವ ರಾಜ್ಯಗಳಿಗೆ ಹೆಚ್ಚು ಅನುದಾನ ನೀಡಿದರೆ ದೇಶಕ್ಕೆ ಒಳ್ಳೆಯದಾಗುತ್ತದೆ ಎಂದು ಕಿಡಿಕಾರಿದ್ದಾರೆ.
ಬಿಹಾಕ್ಕೆ ಈ ಸಲ ಜಾಸ್ತಿ ಒತ್ತು ಕೊಟ್ಟಿದ್ದಾರೆ. ಹಿಂದಿನ ಬಜೆಟ್‌ನಲ್ಲಿ ಆಂಧ್ರಪ್ರದೇಶದ ಅಮರಾವತಿಗೆ ಆದ್ಯತೆ ನೀಡಿದ್ದರು. ಇದು ರಾಜಕೀಯ ಬಜೆಟ್ ಆಗಿದೆ. ಕೇಂದ್ರ ದೇಶ ಕಟ್ಟುವ, ಉದ್ಯೋಗ ಸೃಷ್ಟಿಸುವ ಬಜೆಟ್ ಕೊಟ್ಟಿಲ್ಲ ಎಂದು ದೂರಿದರು.