ಬೆಂಗಳೂರು : ಎಷ್ಟೇ ಚಿರಾಡಲಿ, ಬಟ್ಟೆ ಹರಿದುಕೊಳ್ಳಲಿ ನಾನು ರಾಜೀನಾಮೆ ನೀಡುವುದಿಲ್ಲ ಎಂದು ಬಿಜೆಪಿ ನಾಯಕರ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿನ್ ಪಂಚಾಳ್ ಆತ್ಮಹತ್ಯೆ ಪ್ರಕರಣದಲ್ಲಿ ತನಿಖೆ ನಡೆಸುವಂತೆ ಗೃಹ ಸಚಿವರಿಗೆ ನಾನು ಪತ್ರ ಬರೆದಿದ್ದೆ. ಸಿಎಂ ಮತ್ತು ಗೃಹ ಸಚಿವರನ್ನು ಭೇಟಿಯಾಗಿ ಮಾಹಿತಿ ನೀಡಿ ಮನವಿ ಮಾಡಿದ್ದೆ. ಇದರಂತೆ ಈಗ ಗೃಹ ಸಚಿವರು ಸಿಐಡಿ ತನಿಖೆಗೆ ಆದೇಶ ಮಾಡಿದ್ದಾರೆ ಎಂದರು.
ಬಿಜೆಪಿ ಅವರಿಗೆ ಸಿಬಿಐ ಮೇಲೆ ಪ್ರೀತಿ ಜಾಸ್ತಿ. ಹೀಗಾಗಿ ಸಿಬಿಐ ತನಿಖೆಗೆ ಕೇಳುತ್ತಾರೆ. ವರ್ಷಗಳ ಹಿಂದೆ ಬಿಜೆಪಿ ಕೈಯಲ್ಲಿ ಎಲ್ಲಾ ಸಂಸ್ಥೆಗಳು ಇತ್ತು ಏನ್ ಮಾಡಿದರು? ಬಿಜೆಪಿ ಯಾರದ್ದೋ ತಲೆ ದಂಡ ಆಗುತ್ತೆ ಅಂತ ಕಾಯ್ತಾ ಇದ್ದಾರೆ. ಯಾವುದೇ ಕಾರಣಕ್ಕೂ ಯಾರ ತಲೆ ತಂಡ ಆಗುವುದಿಲ್ಲ ಎಂದು ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ.