ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣಾ ಅಖಾಡಕ್ಕೆ ಇಂದು (ಏಪ್ರಿಲ್ 25) ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಪ್ರವೇಶ ಮಾಡಲಿದ್ದು, ಮಂಗಳವಾರ ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ಅಬ್ಬರದ ಪ್ರಚಾರ ನಡೆಸಲಿದ್ದಾರೆ.
ಮಂಗಳವಾರ ಮಧ್ಯಾಹ್ನ ಮೈಸೂರಿನ ಟಿ.ನರಸೀಪುರ ಕ್ಷೇತ್ರದ ಯಳವರ ಹುಂಡಿಯಲ್ಲಿ ನಡೆಯಲಿರುವ ಸಾರ್ವಜನಿಕ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.
ಬಳಿಕ ಮಧ್ಯಾಹ್ನ 3 ಗಂಟೆಗೆ ಚಾಮರಾಜನಗರ ಜಿಲ್ಲೆಯ ಹನೂರು ಪಟ್ಟಣದ ಗೌರಿಶಂಕರ ಹಾಲ್‌ನಲ್ಲಿ ಮಹಿಳೆಯರೊಂದಿಗೆ ಸಂವಾದ ನಡೆಸಲಿದ್ದಾರೆ. ನಂತರ ಮೈಸೂರು ಜಿಲ್ಲೆಯ ಕೃಷ್ಣರಾಜನಗರ ಕ್ಷೇತ್ರದಲ್ಲಿ ಬೃಹತ್ ರಾರಯಲಿ ನಡೆಸಲಿದ್ದಾರೆ. ತೋಪಮ್ಮ ದೇವಾಲಯದಿಂದ ಅಂಬೇಡ್ಕರ್ ಪ್ರತಿಮೆ ಮೂಲಕ ಪುರಸಭೆ ಕಚೇರಿವರೆಗೆ ಬೃಹತ್ ರಾರಯಲಿ ನಡೆಸುವ ಮೂಲಕ ಶಕ್ತಿ ಪ್ರದರ್ಶನ ನಡೆಸಲಿದ್ದಾರೆ.