ಬೆಂಗಳೂರು : ಲೇಖಕ ಪ್ರೊ.ಮುಝಫರ್ ಹುಸೇನ್ ಅಸ್ಸಾದಿ (63) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ನಿಧನರಾಗಿದ್ದಾರೆ.
ವಿದ್ವಾಂಸ, ಚಿಂತಕ, ಲೇಖಕ , ಮೈಸೂರು ವಿವಿಯ ಹಂಗಾಮಿ ಕುಲಪತಿಯಾಗಿ ಹಾಗೂ ರಾಜ್ಯಶಾಸ್ತ್ರ ವಿಭಾಗದ ಡೀನ್ ಆಗಿ ಸೇವೆ ಸಲ್ಲಿಸಿದ್ದ ಪ್ರೊ.ಮುಝಫರ್ ಅಸ್ಸಾದಿ ಅವರು ಬುಡಕಟ್ಟು ಸಮುದಾಯದವರ ಬದುಕು, ಜೀವನ ಶೈಲಿಯ ಬಗ್ಗೆ ಅಪಾರವಾದ ಅಧ್ಯಯನ ನಡೆಸಿದ್ದಾರೆ.
ನಿನ್ನೆ ತಡರಾತ್ರಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಪ್ರೋ. ಮುಝಫರ್ ಹುಸೇನ್ ಅಸ್ಸಾದಿ ಅವರು ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.