ಬೆಂಗಳೂರು: ರಾಜ್ಯದ ಮುಜರಾಯಿ ದೇವಾಲಯಗಳಲ್ಲಿ ಆಗಸ್ಟ್.15ರಿಂದ ನೀರಿನ ಬಾಟಲಿ ಸೇರಿದಂತ ಎಲ್ಲಾ ಬಗೆಯ ಪ್ಲಾಸ್ಟಿಕ್ ವಸ್ತುಗಳ ಬಳಕೆಯನ್ನು ನಿಷೇಧ ಮಾಡಲಾಗುತ್ತದೆ ಎಂಬುದಾಗಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಇಂದು ವಿಕಾಸಸೌಧದಲ್ಲಿ ಮುಜರಾಯಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಮುಜರಾಯಿ ದೇವಾಲಯಗಳನ್ನು ಪ್ಲಾಸ್ಟಿಕ್ ಮುಕ್ತವಾಗಿಸಲು ನಿರ್ಧರಿಸಲಾಗಿದೆ. ಈ ಹಿನ್ನಲೆಯಲ್ಲಿ ಆಗಸ್ಟ್.15ರಿಂದ ಮುಜರಾಯಿ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ಲಾಸ್ಟಿಕ್ ಬಳಕೆ ಸಂಪೂರ್ಣ ನಿಷೇಧಿಸುತ್ತಿರುವುದಾಗಿ ಹೇಳಿದರು.
ಆಗಸ್ಟ್.15ರಿಂದ ಮುಜರಾಯಿ ದೇವಾಲಯಗಳಲ್ಲಿ ಯಾವುದೇ ಕಾರಣಕ್ಕೂ ಪ್ಲಾಸ್ಟಿಕ್ ಬಳಕೆ ಮಾಡಬಾರದು. ಈ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸಲು 2 ತಿಂಗಳ ಸಮಯಾವಕಾಶ ನೀಡಲಾಗಿದೆ. ಈಗಾಗಲೇ ಪ್ಲಾಸ್ಟಿಕ್ ವಸ್ತುಗಳನ್ನು ದೇವಾಲಯಗಳಲ್ಲಿ ಖರೀದಿಸಿದ್ದರೇ ಬಳಕೆ ಮಾಡಬಹುದು. 2 ತಿಂಗಳ ಬಳಿಕ ಮಾಡುವಂತಿಲ್ಲ ಎಂಬುದಾಗಿ ಹೇಳಿದರು.
 
				 
         
         
         
															 
                     
                     
                     
                     
                    


































 
    
    
        