ಚಿತ್ರದುರ್ಗ : ಬಾಂಗ್ಲಾದೇಶದಲ್ಲಿ ಇಸ್ಲಾಮಿಕ್ ಮೂಲಭೂತವಾದಿಗಳು ಹಿಂದೂಗಳು ಮತ್ತು ಇತರ ಅಲ್ಪಸಂಖ್ಯಾತರ ಮೇಲೆ ದಾಳಿ, ಹತ್ಯೆ, ಲೂಟಿ, ಆಸ್ತಿ ಹಾನಿ ಹಾಗೂ ಮಹಿಳೆಯರ ಮೇಲಿನ ಅಮಾನವೀಯ ದೌರ್ಜನ್ಯಗಳನ್ನು ಖಂಡಿಸಿ ಹಿಂದು ಹಿತರಕ್ಷಣಾ ಸಮಿತಿಯ ಪದಾಧಿಕಾರಿಗಳು ಆನೆಬಾಗಿಲ ಬಳಿಯಿಂದ ಜಲ್ಲಾಧಿಕಾರಿಗಳ ಕಚೇರಿ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆಯನ್ನು ನಡೆಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಬಳಿಯಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಮಾತನಾಡಿದ ಶಿವಮೊಗ್ಗದ ಪರಿವಾದ ಪ್ರಮುಖರಾದ ಹಿರಿಯರಾದ ಪಟ್ಟಾಭಿಜೀಯವರು, ನಮ್ಮ ಈ ಸಭೆ ಯಾವ ಸರ್ಕಾರ, ರಾಜಕೀಯ ಪಕ್ಷದ, ಮುಸ್ಲಿಂರವರ ವಿರುದ್ದ ಅಲ್ಲ ಬಾಂಗ್ಲಾದೇಶದಲ್ಲಿ ಇಸ್ಲಾಮಿಕ್ ಮೂಲಭೂತವಾದಿಗಳು ಹಿಂದೂಗಳು ಮತ್ತು ಇತರ ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಿ ನಡೆಯುತ್ತಿರುವ ಸಭೆಯಾಗಿದೆ ಎಂದರು.
ಇದಕ್ಕೆ ಸೂಕ್ತವಾದ ಪರಿಹಾರವನ್ನು ಕಂಡುಕೊಳ್ಳುವ ಜಾಗೃತಿಯನ್ನು ಸಭೆಯಾಗಿದೆ. ಇಂದಿನ ದಿನಮಾನದಲ್ಲಿ ಪ್ರಪಂಚವೇ ಸಣ್ಣ ಕುಟುಂಬವಾಗಿದೆ. ಆದ್ದರಿಂದ ಇಲ್ಲಿನ ನಡೆಯುವ ಪ್ರತಿಭಟನಾ ಸಭೆಯನ್ನು ನಡೆಸುವುದರ ಮೂಲಕ ಅಲ್ಲಿನ ಹಿಂದುಗಳಿಗೆ ಧೈರ್ಯವನ್ನು ತಂಬುವ ಕಾರ್ಯವನ್ನು ಮಾಡಲಾಗುತ್ತಿದೆ ಎಂದರು.
ವರ್ತಮಾನದ ಬಾಂಗ್ಲಾದೇಶದ ಸರ್ಕಾರ ಮತ್ತು ಅನ್ಯ ಸರ್ಕಾರಿ ಸುರಕ್ಷಾ ಸಂಸ್ಥೆಗಳು ಇದನ್ನು ನಿಲ್ಲಿಸುವ ಬದಲು ಕೇವಲ ಮೂಕಪ್ರೇಕ್ಷಕರಾಗಿದ್ದಾರೆ. ಬಾಂಗ್ಲಾದೇಶದ ಹಿಂದೂಗಳ ವಿರುದ್ಧ ಬಲವಂತವಾಗಿ, ಅಲ್ಲಿನ ಅಲ್ಪಸಂಖ್ಯಾತ ಹಿಂದೂಗಳು ತಮ್ಮ ಸ್ವರಕ್ಷಣೆಗಾಗಿ ಪ್ರಜಾಸತ್ತಾತ್ಮಕ ವಿಧಾನಗಳ ಮೂಲಕ ಎತ್ತಿದ್ದ ಧ್ವನಿಯನ್ನು ಹತ್ತಿಕ್ಕುವ ಮತ್ತು ಅವರ ಮೇಲೆ ಅನ್ಯಾಯ ಹಾಗೂ ಅತ್ಯಾಚಾರದಂತಹ ದುಷ್ಕೃತ್ಯಗಳನ್ನು ಎಸಗುವ ಹೊಸ ಯುಗವು ಹೊರಹೊಮ್ಮುತ್ತಿರುವಂತೆ ತೋರುತ್ತಿದೆ.ಹಾಗೆಯೇ ಇಂತಹ ಘಟನೆಗಳ ವಿರುದ್ಧ ಹಿಂದುಗಳ ಪರ ಶಾಂತಿಯುತ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಇಸ್ಕಾನ್ನ ಸನ್ಯಾಸಿ ಚಿನ್ಮಯ್ ಕೃಷ್ಣದಾಸರನ್ನು ಬಾಂಗ್ಲಾದೇಶದ ಸರಕಾರ ಬಂಧಿಸಿ ಸೆರೆಮನೆಗೆ ಕಳುಹಿಸಿರುವುದು ಅನ್ಯಾಯಪೂರ್ಣವಾದದ್ದು ಎಂದರು.
ಇದೇ ಸಂದರ್ಭದಲ್ಲಿ ಮಾದಾರ ಗುರುಪೀಠದ ಶ್ರೀ ಮಾದಾರ ಚನ್ನಯ್ಯ ಶ್ರೀಗಳು ಮಾತನಾಡಿ, ಭಾರತೀಯರಾದ ನಾವುಗಳು ನಮ್ಮಲ್ಲಿ ಎಲ್ಲರನ್ನು ಒಂದು ಗೂಡಿಸುತ್ತೇವೆ ಆದರೆ ಬೇರೆ ರಾಷ್ಟ್ರಗಳು ನಮ್ಮ ಮೇಲೆ ಹಲ್ಲೆಯನ್ನು ಮಾಡುವ ಕಾರ್ಯವನ್ನು ಮಾಡುತ್ತಿರುವುದು ಖಂಡನೀಯಎಂದರು.
ಬೇರೆ ರಾಷ್ಟ್ರಗಳಿಂದ ನಮ್ಮಲ್ಲಿ ಬಂದವರಿಗೆ ಸಹಾಯವನ್ನು ಮಾಡುತ್ತೇವೆ ಆದರೆ ಬೇರೆ ರಾಷ್ಟ್ರಗಳಲ್ಲಿ ಇರುವ ನಮ್ಮ ಹಿಂದೂಗಳ ಮೇಲೆ ಈ ರೀತಿಯಾದ ಕೃತ್ಯವನ್ನು ನಡೆಸುವುದು ಅಂತಕಕ್ಕೆ ಈಡು ಮಾಡಿದೆ. ಇದರ ಬಗ್ಗೆ ಕೇಂದ್ರ ಸರ್ಕಾರ ಮಧ್ಯಸ್ಥಿಕೆಯನ್ನು ವಹಿಸುವುದರ ಮೂಲಕ ಬಾಂಗ್ಲಾ ದೇಶದಲ್ಲಿನ ಹಿಂದುಗಳಿಗೆ ರಕ್ಷಣೆ ಸವೆರ್Àಯನ್ನು ಮಾಡುವ ಕಾರ್ಯವನ್ನು ಮಾಡಬೇಕಿದೆ ಎಂದು ಆಗ್ರಹಿಸಿದರು.
ಕಾರ್ಯಕ್ರಮದಲ್ಲಿ ಮಾಜಿ ಶಾಸಕರಾದ ಜಿ.ಎಚ್.ತಿಪ್ಪಾರೆಡ್ಡಿ, ತಿಪ್ಪೇಸ್ವಾಮಿ, ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್. ನವೀನ್, ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರಳಿ, ಪ್ರಧಾನ ಕಾರ್ಯದರ್ಶಿಗಳಾದ ಸಂಪತ್ಕುಮಾರ್, ಸುರೇಶ್ ಸಿದ್ದಾಪುರ, ಜಿ.ಪಂ.ಮಾಜಿ ಅಧ್ಯಕ್ಷೆ ಶ್ರೀಮತಿ ಸೌಭಾಗ್ಯ ಬಸವರಾಜನ್, ಬಸಮ್ಮ, ವಕ್ತಾರ ನಾಗರಾಜ್ ಬೇದ್ರೇ, ಛಲವಾದಿ ತಿಪ್ಪೇಸ್ವಾಮಿ, ರಾಜ್ಯ ರೈತ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜನ್, ಚಂದ್ರಶೇಖರ್, ಸೇರಿದಂತೆ ಇತರರು ಭಾಗವಹಿಸಿದ್ದರು.

































