ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಕರ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ..!

WhatsApp
Telegram
Facebook
Twitter
LinkedIn

 

ಚಿತ್ರದುರ್ಗ: ಜಿಲ್ಲೆಯ ಭರಮಸಾಗರ, ಚಿತ್ರದುರ್ಗ, ಚಳ್ಳಕೆರೆ, ಹಿರಿಯೂರು, ಹೊಳಲ್ಕೆರೆ, ಹೊಸದುರ್ಗ ಮತ್ತು ಮೊಳಕಾಲ್ಮೂರು ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿಯಿದ್ದ 22 ಅಂಗನವಾಡಿ ಕಾರ್ಯಕರ್ತೆ ಹಾಗೂ 228 ಅಂಗನವಾಡಿ ಸಹಾಯಕರ ಹುದ್ದೆಗಳ ನೇಮಕಾತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿ ಭರ್ತಿ ಮಾಡಲು 05 ಆಗಸ್ಟ್ 2025 ರಂದು ಅಧಿಸೂಚನೆ ಹೊರಡಿಸಲಾಗಿತ್ತು.

ಸದರಿ ಹುದ್ದೆಗಳ ನೇಮಕಾತಿಗಾಗಿ ದಿನಾಂಕ 12-03-2026 ರಂದು ನಡೆದ ಜಿಲ್ಲಾ ಮಟ್ಟದ ಆಯ್ಕೆ ಸಮಿತಿ ಸಭೆಯಲ್ಲಿ ಅರ್ಹ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆಪಟ್ಟಿ ಸಿದ್ದಪಡಿಸಲಾಗಿದೆ. ಸದರಿ ಆಯ್ಕೆ ಪಟ್ಟಿಯನ್ನು ಎಲ್ಲಾ ತಾಲ್ಲೂಕು ಶಿಶು ಅಭಿವೃದ್ಧಿ ಯೊಜನಾಧಿಕಾರಿಗಳ ಕಚೇರಿ ಸೂಚನಾ ಫಲಕ, ಅಂಗನವಾಡಿ ಕೇಂದ್ರ, ಗ್ರಾಮ ಪಂಚಾಯಿತಿ, ಶಾಲೆ, ಸಮುದಾಯ ಭವನ ಹಾಗೂ ಗ್ರಂಥಾಲಯಗಳಲ್ಲಿ ಪ್ರಕಟಿಸಲಾಗಿದೆ.

ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆಗಳು ಇದ್ದಲ್ಲಿ, ಸೂಕ್ತ ದಾಖಲೆಗಳೊಂದಿಗೆ ದಿನಾಂಕ 10-04-2026 ರ ಸಂಜೆ 5:30ರ ಒಳಗಾಗಿ ಆಯಾ ತಾಲ್ಲೂಕು ಶಿಶು ಆಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಗೆ ಸಲ್ಲಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವಿಜಯಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon