ಬೆಂಗಳೂರು: ಪ್ರಕರಣವೊಂದರ ಸಂಬಂಧ ಪಬ್ಲಿಕ್ ಪ್ರಾಸಿಕ್ಯೂಟರ್ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಬೆಂಗಳೂರಿನ 45ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ಪಬ್ಲಿಕ್ ಪ್ರಾಸಿಕ್ಯೂಟರ್ ಕೆ.ಎಸ್. ಲತಾ ಬಂಧಿತರು. ರಾಜಾಜಿನಗರದ ಎರಡನೇ ಹಂತದ ನಿವಾಸಿ ಎಂ. ರಾಜಾ ನೀಡಿದ ದೂರಿನ ಮೇರೆಗೆ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.
ಪ್ರಕರಣವೊಂದರ ಸಂಬಂಧ ನ್ಯಾಯಾಲಯಕ್ಕೆ ಆಕ್ಷೇಪಣೆ ಸಲ್ಲಿಸಲು ಪಬ್ಲಿಕ್ ಪ್ರಾಸಿಕ್ಯೂಟರ್ ಲತಾ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ನಮ್ಮ ರಾಜಾ ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ರಾಜಾ ಅವರಿಂದ ಕೆ.ಎಸ್. ಲತಾ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಭ್ರಷ್ಟಾಚಾರ ತಡೆ ಕಾಯಿದೆಯಡಿ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗಿದೆ.
































