ಬೆಂ.ಗ್ರಾ.ಜಿಲ್ಲೆ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಜಿಲ್ಲೆಯ 4 ತಾಲ್ಲೂಕಿನ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಆಯ್ಕೆ ಸಂಬಂಧ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲಾಗಿದೆ.
ಅರ್ಹ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು 4 ತಾಲ್ಲೂಕಿನ ಗ್ರಾಮ ಪಂಚಾಯಿತಿ, ಶಾಲೆ ಹಾಗೂ ಅಂಗನವಾಡಿ ಕೇಂದ್ರಗಳಲ್ಲಿ ನಿಯಮಾನುಸಾರ ಪ್ರಕಟಿಸಲಾಗಿದೆ. ತಾತ್ಕಾಲಿಕವಾಗಿ ಆಯ್ಕೆಯಾಗಿರುವ ಅಭ್ಯರ್ಥಿಗಳ ಕುರಿತು ಆಕ್ಷೇಪಣೆ ಇದ್ದಲ್ಲಿ ಸೂಕ್ತ ಲಿಖಿತ ದಾಖಲೆಗಳೊಂದಿಗೆ ಅಕ್ಟೋಬರ್ 18 ರೊಳಗೆ ಆಯಾ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಗೆ ಕಛೇರಿ ಅವಧಿಯಲ್ಲಿ ನೀಡಲು ತಿಳಿಸಿದೆ ಹಾಗೂ ನಂತರ ಬರುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೊಸಕೋಟೆ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಹೊಸಕೋಟೆ ತಾಲ್ಲೂಕಿನ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 14 ಅಂಗನವಾಡಿ ಕಾರ್ಯಕರ್ತೆ ಮತ್ತು 66 ಅಂಗನವಾಡಿ ಸಹಾಯಕಿಯರ ಆಯ್ಕೆ ಸಂಬಂಧ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲಾಗಿದೆ.
ಅರ್ಹ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಹೊಸಕೋಟೆ ತಾಲ್ಲೂಕಿನ ಗ್ರಾಮ ಪಂಚಾಯಿತಿ, ಶಾಲೆ ಹಾಗೂ ಅಂಗನವಾಡಿ ಕೇಂದ್ರಗಳಲ್ಲಿ ನಿಯಮಾನುಸಾರ ಪ್ರಕಟಿಸಲಾಗಿದೆ. ತಾತ್ಕಾಲಿಕವಾಗಿ ಆಯ್ಕೆಯಾಗಿರುವ 13 ಅಂಗನವಾಡಿ ಕಾರ್ಯಕರ್ತೆ ಮತ್ತು 32 ಸಹಾಯಕಿಯರ ಅಭ್ಯರ್ಥಿಗಳ ಕುರಿತು ಆಕ್ಷೇಪಣೆ ಇದ್ದಲ್ಲಿ ಸೂಕ್ತ ಲಿಖಿತ ದಾಖಲೆಗಳೊಂದಿಗೆ ಅಕ್ಟೋಬರ್ 18 ರೊಳಗೆ ಹೊಸಕೋಟೆ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಗೆ ಕಛೇರಿ ಅವಧಿಯಲ್ಲಿ ನೀಡಲು ತಿಳಿಸಿದೆ ಹಾಗೂ ನಂತರ ಬರುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಹೊಸಕೋಟೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೇವನಹಳ್ಳಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ದೇವನಹಳ್ಳಿ ತಾಲ್ಲೂಕಿನ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 10 ಅಂಗನವಾಡಿ ಕಾರ್ಯಕರ್ತೆ ಮತ್ತು 42 ಅಂಗನವಾಡಿ ಸಹಾಯಕಿಯರ ಆಯ್ಕೆ ಸಂಬಂಧ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲಾಗಿದೆ.
ಅರ್ಹ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ದೇವನಹಳ್ಳಿ ತಾಲ್ಲೂಕಿನ ಗ್ರಾಮ ಪಂಚಾಯಿತಿ, ಶಾಲೆ ಹಾಗೂ ಅಂಗನವಾಡಿ ಕೇಂದ್ರಗಳಲ್ಲಿ ನಿಯಮಾನುಸಾರ ಪ್ರಕಟಿಸಲಾಗಿದೆ. ತಾತ್ಕಾಲಿಕವಾಗಿ ಆಯ್ಕೆಯಾಗಿರುವ 9 ಅಂಗನವಾಡಿ ಕಾರ್ಯಕರ್ತೆ ಮತ್ತು 19 ಸಹಾಯಕಿಯರ ಅಭ್ಯರ್ಥಿಗಳ ಕುರಿತು ಆಕ್ಷೇಪಣೆ ಇದ್ದಲ್ಲಿ ಸೂಕ್ತ ಲಿಖಿತ ದಾಖಲೆಗಳೊಂದಿಗೆ ಅಕ್ಟೋಬರ್ 18 ರೊಳಗೆ ದೇವನಹಳ್ಳಿ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಗೆ ಕಛೇರಿ ಅವಧಿಯಲ್ಲಿ ನೀಡಲು ತಿಳಿಸಿದೆ ಹಾಗೂ ನಂತರ ಬರುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ದೇವನಹಳ್ಳಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
(ಸಾಂದರ್ಭಿಕ ಚಿತ್ರ)