ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಬಸ್ ಸಂಚಾರ ಮಾಡಿದ ಕಾರಣಕ್ಕೆ ನಗರದ ಯುನಿವರ್ಸಿಟಿ ಕಾಲೇಜು ಬಳಿ ಖಾಸಗಿ ಬಸ್ ಗಳ ಮೇಲೆ ಕಲ್ಲು ತೂರಾಟ ನಡೆದಿದೆ.
ದುಷ್ಕರ್ಮಿಗಳು ಬಸ್ಸುಗಳಿಗೆ ಕಲ್ಲು ತೂರಿದ್ದು ಮೂರು ಬಸ್ ಗಳಿಗೆ ಹಾನಿಯಾಗಿದೆ ಎಂದು ತಿಳಿದುಬಂದಿದೆ. ಇದೀಗ ಬಸ್ ಸಂಚಾರ ಕೂಡಾ ಸ್ಥಗಿತಗೊಂಡಿದೆ.
ಇನ್ನು ದ.ಕ ಜಿಲ್ಲೆಯಲ್ಲಿ ಅಹಿತಕರ ಘಟನೆ ನಡೆಯದಂತೆ, ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಮೇ.೫ರವರೆಗೆ ನಿಷೇಧಾಜ್ಞೆ ಜಾರಿ ಮಾಡಿ ದ.ಕ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.