ಚಂಡೀಗಢ : ಪಂಜಾಬ್ ಬಂದ್ ಕರೆ ಅಂಗವಾಗಿ ಸೋಮವಾರ ರಾಜ್ಯಾದ್ಯಂತ ಹಲವೆಡೆ ರೈತರು ರಸ್ತೆ ತಡೆ ನಡೆಸಿದ ಕಾರಣ ಟ್ರಾಫಿಕ್ ಜಾಮ್ ಉಂಟಾಯಿತು.
ಪ್ರತಿಭಟನಾ ನಿರತ ರೈತರ ಬೇಡಿಕೆಗಳನ್ನು ಕೇಂದ್ರ ಒಪ್ಪಿಕೊಳ್ಳದಿರುವುದನ್ನು ಖಂಡಿಸಿ ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ಕಳೆದ ವಾರ ಬಂದ್‌ಗೆ ಕರೆ ನೀಡಿದ್ದವು. ಬೆಳಗ್ಗೆ 7ರಿಂದ ಸಂಜೆ 4ರವರೆಗೆ ಬಂದ್ ಮಾಡಲಾಗುವುದು ಎಂದು ತಿಳಿಸಿದ್ದರು. ಧರೇರಿ ಜತ್ತನ್ ಟೋಲ್ ಪ್ಲಾಜಾದಲ್ಲಿ ರೈತರು ಧರಣಿ ನಡೆಸಿದ್ದರಿಂದ ಪಟಿಯಾಲ-ಚಂಡೀಗಢ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ತೊಂದರೆಯಾಯಿತು.
ಅಮೃತಸರದ ಗೋಲ್ಡನ್ ಗೇಟ್‌ನಲ್ಲಿ, ರೈತರು ನಗರದ ಪ್ರವೇಶ ಬಿಂದುವಿನ ಬಳಿ ಜಮಾಯಿಸಲು ಪ್ರಾರಂಭಿಸಿದರೆ, ಬಟಿಂಡಾದ ರಾಂಪುರ ಫುಲ್‌ನಲ್ಲಿ ಅವರು ರಸ್ತೆಗಳನ್ನು ತಡೆದರು. ಸಂಪೂರ್ಣ ಬಂದ್ ಇದ್ದರೂ ತುರ್ತು ಸೇವೆಗಳಿಗೆ ಅವಕಾಶ ನೀಡಲಾಗುವುದು ಎಂದು ರೈತ ಮುಖಂಡ ಸರ್ವಾನ್ ಸಿಂಗ್ ಪಂಧೇರ್ ಭಾನುವಾರ ಹೇಳಿದ್ದರು. ಏತನ್ಮಧ್ಯೆ, 70 ವರ್ಷ ವಯಸ್ಸಿನ ರೈತ ನಾಯಕ ಜಗಜಿತ್ ಸಿಂಗ್ ದಲ್ಲೆವಾಲ್ ಅವರ ಉಪವಾಸ ಸತ್ಯಾಗ್ರಹ ಸೋಮವಾರ 35 ನೇ ದಿನಕ್ಕೆ ಕಾಲಿಟ್ಟಿದೆ.