ನವದೆಹಲಿ: ಉಕ್ರೇನ್‌ನೊಂದಿಗೆ ಶಾಂತಿಯುತ ಇತ್ಯರ್ಥಕ್ಕಾಗಿ ರಷ್ಯಾ ಕೆಲಸ ಮಾಡುತ್ತಿದೆ ಎಂದು ಹೇಳುವ ಮೂಲಕ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಉಕ್ರೇನ್ ವಿರುದ್ಧದ ಯುದ್ಧ ನಿಲ್ಲಿಸುವ ಕುರಿತು ಸುಳಿವು ನೀಡಿದ್ದಾರೆ.
ಹೈದರಾಬಾದ್ ಹೌಸ್‌ನಲ್ಲಿ ನಡೆದ ಭಾರತ-ರಷ್ಯಾ ನಡುವಿನ 23ನೇ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಅವರೊಂದಿಗೆ ಪುಟಿನ್ ಸಂವಾದ ನಡೆಸಿದರು. ಇದೇ ವೇಳೆ ಉಕ್ರೇನ್‌ನಲ್ಲಿ ಶಾಂತಿ ಸ್ಥಾಪಿಸಲು ಪ್ರಧಾನಿ ಮೋದಿ ಅವರ ಪ್ರಯತ್ನಗಳನ್ನ ಶ್ಲಾಘಿಸಿದರು. ನಂತರ ಉಕ್ರೇನ್‌ನೊಂದಿಗೆ ಶಾಂತಿಯುತ ಇತ್ಯರ್ಥಕ್ಕಾಗಿ ರಷ್ಯಾ ಕೆಲಸ ಮಾಡುತ್ತಿದೆ ಎಂದು ಹೇಳಿದರು.
ಮೊದಲಿಗೆ ನನ್ನನ್ನ ಭಾರತಕ್ಕೆ ಆಹ್ವಾನಿಸಿದ್ದಕ್ಕಾಗಿ ಪ್ರಧಾನಿ ಮೋದಿ ಅವರಿಗೆ ನಾನು ಕೃತಜ್ಞನಾಗಿದ್ದೇನೆ. ಉಕ್ರೇನ್ ಜೊತೆಗೆ ಶಾಂತಿಯುತ ಇತ್ಯರ್ಥಕ್ಕಾಗಿ ರಷ್ಯಾ ಕೆಲಸ ಮಾಡುತ್ತಿದೆ. ಅಲ್ಲದೇ ರಷ್ಯಾ ಮತ್ತು ಭಾರತದ ನಡುವಿನ ಸಂಬಂಧವು ನಂಬಿಕೆಯನ್ನ ಆಧರಿಸಿದೆ. ನಾವು ಶಾಂತಿಯ ಮಾರ್ಗದಲ್ಲಿ ಪ್ರಯಾಣಿಸಿದರೆ ಮಾತ್ರ ವಿಶ್ವಕ್ಕೆ ಪ್ರಯೋಜನವಾಗುತ್ತದೆ ಎಂದು ತಿಳಿಸಿದರು.

































