ಚಿತ್ರದುರ್ಗ: ಪಿಯುಸಿ ಫಲಿತಾಂಶ ಸುಧಾರಣೆಯಲ್ಲಿ ಉಪನ್ಯಾಸಕರುಗಳ ಹಾಗೂ ವಿದ್ಯಾರ್ಥಿಗಳ ಬದ್ದತೆ ಪ್ರಮುಖ ಪಾತ್ರವಹಿಸುತ್ತದೆ ಎಂದು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ)ಯ ಉಪನಿರ್ದೇಶಕರಾದ ಆರ್.ಪುಟ್ಟಸ್ವಾಮಿ ತಿಳಿಸಿದರು
ನಗರದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರ ಆಯೋಜಿಸಿದ್ದ ರಾಜ್ಯಶಾಸ್ತ್ರ ವಿಷಯದ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು. ಪಿಹೆಚ್ಡಿ ಸಹಿತ ಹತ್ತು ಹಲವು ಪದವಿ ಪಡೆದ ಉಪನ್ಯಾಸಕರು ಎಷ್ಟೇ ಬುದ್ದಿವಂತರಾಗಿದ್ದರೂ ತರಗತಿಗಳಲ್ಲಿ ವಿದ್ಯಾರ್ಥಿಗಳನ್ನು ತಲುಪದೆ ಹೋದರೆ ತರಗತಿಗಳು ಯಶಸ್ವಿಯಾಗುವುದಿಲ್ಲ ಎಂದರು.
ಚಿತ್ರದುರ್ಗ ಜಿಲ್ಲಾ ಉಪನ್ಯಾಸಕರ ಸಂಘದ ಅಧ್ಯಕ್ಷ ಬಿ.ಆರ್.ಮಲ್ಲೇಶ್ ರಾಜ್ಯಶಾಸ್ತ್ರ ವೇದಿಕೆಯ ಅಧ್ಯಕ್ಷರಾದ ಡಾ.ಜೆ.ಮೋಹನ್ ಪ್ರಾಸ್ತಾವಿಕ ಮಾತನಾಡಿದರು. ಪ್ರಾಂಶುಪಾಲರಾದ ವಿ.ಲೋಕೇಶ್ ರವರು ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು.
. ಹಿರಿಯ ಪ್ರಾಂಶುಪಾಲರಾದ ಹೆಚ್.ಬಿ.ನರಸಿಂಹಮೂರ್ತಿ, ಜಿ.ದೇವರಾಜ್, ಪ್ರಾಂಶುಪಾಲರ ಸಂಘದ ಅಧ್ಯಕ್ಷ ಎಸ್.ದೇವೇಂದ್ರಪ್ಪ,ಸಂಪನ್ಮೂಲ ವ್ಯಕ್ತಿ ಡಾ.ಎನ್. ಪ್ರಭಾಕರ್ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.
ಉಪನ್ಯಾಸಕಿ ಶ್ರೀಮತಿ ಮೀರಾ ನಾಡಿಗ್ ಪ್ರಾರ್ಥಿಸಿದರು,ಉಪನ್ಯಾಸಕ ಬುಡೇನ್ಸಾಬ್ ಸ್ವಾಗತಿಸಿದರು, ಪ್ರಾಂಶುಪಾಲರಾದ ಶ್ರೀಮತಿ ಸರೋಜಮ್ಮ ವಂದಿಸಿದರು.ಉಪನ್ಯಾಸಕ ಆರ್.ಚಂದ್ರಶೇಖರ್ ಕಾರ್ಯಕ್ರಮ ನಿರ್ವಹಣೆ ಮಾಡಿದರು.