ನವದೆಹಲಿ : ಡಾ. ಮನಮೋಹನ್ ಸಿಂಗ್ ಅಂತ್ಯಕ್ರಿಯೆ ವಿಚಾರದಲ್ಲೂ ರಾಜಕೀಯ ಕೆಸರೆರಚಾಟ ಆರಂಭವಾದದಂತಿದೆ.
ಬೋಧ್ ಘಾಟ್‌ನಲ್ಲಿಂದು ಅಂತ್ಯಕ್ರಿಯೆ ನೆರವೇರಿದ ಬಳಿಕ ಕೆರಳಿ ಕೆಂಡವಾದ ರಾಹುಲ್ ಗಾಂಧಿ , ನಿಗಮ್ ಬೋಧ್ ಘಾಟ್‌ನಲ್ಲಿ ಅಂತ್ಯಕ್ರಿಯೆ ಮಾಡುವ ಮೂಲಕ ಮನಮೋಹನ್ ಸಿಂಗ್ ಅವರಿಗೆ ಬಿಜೆಪಿ ಅವಮಾನ ಮಾಡಿದೆ ಅಂತ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಭಾರತಮಾತೆಯ ಮಹಾನ್ ಪುತ್ರ ಹಾಗೂ ಸಿಖ್ ಸಮುದಾಯದ ಮೊದಲ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ಅಂತಿಮ ಸಂಸ್ಕಾರವನ್ನು ನಿಗಮಬೋಧ್ ಘಾಟ್‌ನಲ್ಲಿ ನೆರವೇರಿಸುವ ಮೂಲಕ ಪ್ರಸ್ತುತ ಸರ್ಕಾರ ಅವರಿಗೆ ಸಂಪೂರ್ಣ ಅವಮಾನ ಮಾಡಿದೆ. ಮನಮೋಹನ್ ಸಿಂಗ್ ಒಂದು ದಶಕದ ಕಾಲ ಭಾರತದ ಪ್ರಧಾನಿಯಾಗಿದ್ದರು. ಅವರ ಅಧಿಕಾರಾವಧಿಯಲ್ಲಿ ದೇಶವು ಆರ್ಥಿಕ ಮಹಾಶಕ್ತಿಯಾಯಿತು ಮತ್ತು ಅವರ ನೀತಿಗಳು ಇನ್ನೂ ದೇಶದ ಬಡ ಮತ್ತು ಹಿಂದುಳಿದ ವರ್ಗಗಳಿಗೆ ಬೆಂಬಲ ನೀಡುತ್ತಿವೆ.
ಇಲ್ಲಿಯ ತನಕದ ಎಲ್ಲಾ ಮಾಜಿ ಪ್ರಧಾನಿಗಳ ಘನತೆಯನ್ನು ಗೌರವಿಸಿ, ಅವರ ಅಂತಿಮ ವಿಧಿಗಳನ್ನು ಅಧಿಕೃತ ಸಮಾಧಿಗಳಲ್ಲಿ ನಡೆಸಲಾಯಿತು, ಇದರಿಂದ ಪ್ರತಿಯೊಬ್ಬ ವ್ಯಕ್ತಿಯೂ ಯಾವುದೇ ಅನಾನುಕೂಲತೆ ಇಲ್ಲದೇ ಗೌರವ ಸಲ್ಲಿಸಬದಾಗಿದೆ. ಹಾಗೆಯೇ ದೇಶದ ಈ ಮಹಾನ್ ಪುತ್ರ ಮತ್ತು ಅವರ ಸಮುದಾಯದ ಬಗ್ಗೆ ಸರ್ಕಾರ ಗೌರವ ತೋರಿಸಬೇಕಿತ್ತು. ಆದ್ರೆ ಸಂಪೂರ್ಣ ಅಪಮಾನ ಮಾಡಿದೆ ಎಂದು ಬರೆದುಕೊಂಡಿದ್ದಾರೆ.ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ಅಂತ್ಯ ಸಂಸ್ಕಾರ ನಡೆಸುವಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿನ್ನೆ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದರು.