ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಇವತ್ತೇ ಭಾರೀ ಮಳೆ ಆರಂಭವಾಗಿದೆ. ಮಹಾರಾಷ್ಟ್ರದಿಂದ ರಾಜ್ಯದ ಪಶ್ಚಿಮ ಭಾಗದತ್ತ ಭಾರೀ ಗಾಳಿ ಬೀಸುತ್ತಿದ್ದು, ಇದರ ಪರಿಣಾಮ ರಾಜ್ಯದ ಹಲವೆಡೆ ವರುಣ ಅಬ್ಬರಿಸುತ್ತಿದ್ದಾನೆ.
ನಾಳೆಯೂ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕೋಲಾರ, ಹಾಸನ, ಮಂಡ್ಯ, ಮೈಸೂರು ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಚಿತ್ರದುರ್ಗ, ಶಿವಮೊಗ್ಗ, ಮೈಸೂರು, ತುಮಕೂರು, ಬೀದರ್, ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಯಲ್ಲೂ ಅಧಿಕ ಮಳೆಯಾಗುವ ಸಾಧ್ಯತೆ ಇದೆ.