ಬೆಂಗಳೂರು: ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು, ಕೊಡಗು, ಮೈಸೂರು, ಚಿಕ್ಕಮಗಳೂರು, ಚಾಮರಾಜನಗರ, ಮಂಡ್ಯ ಜಿಲ್ಲೆಗಳು ಹಾಗೂ ಕರಾವಳಿ, ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಲಬುರಗಿಯಲ್ಲಿ 40.2 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಭಾಗಶಃ ಮೋಡಕವಿದ ವಾತಾವರಣವಿರಲಿದ್ದು, ರಾತ್ರಿ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ. ಎಚ್ಎಎಲ್ನಲ್ಲಿ 34.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 35.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.