ಬೆಂಗಳೂರು: ಮುಂಗಾರು ಪೂರ್ವ ಮಳೆ ಬಳಿಕ ಮುಂಗಾರು ಆರಂಭವಾಗುತ್ತಿದ್ದಂತೆಯೇ ಮಳೆ ಕ್ಷೀಣಿಸಿದೆ. ಜೂನ್ 10ರ ಬಳಿಕ ಮಳೆ ಮತ್ತೆ ಚುರುಕುಗೊಳ್ಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ರಾಯಚೂರು, ಕೊಪ್ಪಳ, ಯಾದಗಿರಿ, ಕಲಬುರಗಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಒಣಹವೆ ಇದ್ದು, ಆಗಾಗ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಇನ್ನು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಚಿಕ್ಕಮಗಳೂರು, ಕೋಲಾರ, ತುಮಕೂರು, ದಾವಣಗೆರೆ, ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಕೊಂಚ ಮಳೆಯಾಗುವ ಸಾಧ್ಯತೆ ಇದೆ.