ಶ್ರೀನಗರ : ಪಾಕಿಸ್ತಾನವು ಪಿಒಕೆಯನ್ನು ಭಯೋತ್ಪಾದಕ ಕೇಂದ್ರವಾಗಿ ಬಳಸುತ್ತಿದೆ. ಈ ಬಗ್ಗೆ ಕ್ರಮ ಕೈಗೊಳ್ಳಲಾಗುತ್ತದೆ. ಜಮ್ಮು ಮತ್ತು ಕಾಶ್ಮೀರವನ್ನು ಅಸ್ಥಿರಗೊಳಿಸಲು ಪಾಕಿಸ್ತಾನವು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಟೀಕಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಅಖ್ನೂರ್ನಲ್ಲಿ ನಡೆದ ರ್ಯಾಲಿಯಲ್ಲಿ ಮಾತನಾಡಿದ ಅವರು, ಜಮ್ಮು ಮತ್ತು ಕಾಶ್ಮೀರ ಹಾಗೂ ದೆಹಲಿಯ ಜನರ ಹೃದಯಗಳ ನಡುವಿನ ಅಂತರವನ್ನು ಕಡಿಮೆ ಮಾಡಲು ಪ್ರಯತ್ನಗಳು ನಡೆಯುತ್ತಿವೆ ಎಂದು ಹೇಳಿದರು.
ಇನ್ನು ಭಾರತದ ಕುರಿತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದ (ಪಿಒಕೆ) ಪ್ರಧಾನಿ ಚೌಧರಿ ಅನ್ವರುಲ್ ಹಕ್ ಅವರ ಹೇಳಿಕೆಗಳ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಪಿಒಕೆ ಇಲ್ಲದೆ ಜಮ್ಮು ಮತ್ತು ಕಾಶ್ಮೀರ ಅಪೂರ್ಣ ಎಂದರು.
ಪಿಒಕೆ ಪ್ರಧಾನಿ ಚೌಧರಿ ಅನ್ವರುಲ್ ಹಕ್ ಇತ್ತೀಚೆಗೆ ಭಾರತದ ವಿರುದ್ಧ ಜಿಹಾದ್ಗೆ ಕರೆ ನೀಡಿದ್ದರು. ಜೊತೆಗೆ ಜಮ್ಮು ಮತ್ತು ಕಾಶ್ಮೀರದಿಂದ ಭಾರತೀಯ ಪಡೆಗಳನ್ನು ಹೊರಹಾಕಲು ತಮ್ಮ ಸರ್ಕಾರ ಲಭ್ಯವಿರುವ ಎಲ್ಲಾ ಸಂಪನ್ಮೂಲಗಳನ್ನು ಸಜ್ಜುಗೊಳಿಸುವುದಾಗಿ ಘೋಷಣೆ ಮಾಡಿದ್ದರು.