ಬಳ್ಳಾರಿ : ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮೂರನೇ ಆರೋಪಿಯನ್ನು ಬಂಧಿಸಲಾಗಿದೆ.
ಬಳ್ಳಾರಿ ಮೂಲದ ಸಾಹಿಲ್ ಜೈನ್ ಬಂಧಿತ ಆರೋಪಿ.
ರನ್ಯಾ ರಾವ್ ಜೊತೆಗೆ ವಾಟ್ಸಾಪ್ ಚಾಟಿಂಗ್ ಮಾಡಿದ್ದ ಹಿನ್ನೆಲೆ ಸಾಹಿಲ್ ಜೈನ್ ನನ್ನು ಬಂಧಿಸಲಾಗಿದೆ. ಸಾಹಿಲ್ ಜೈನ್ ತಂದೆ ಮಹೇಂದ್ರ ಜೈನ್ ಅವರ ಸಹೋದರರ ಬಟ್ಟೆ ಅಂಗಡಿ ಬಳ್ಳಾರಿಯಲ್ಲಿದ್ದು, ಸಹೋದರರು ಬಳ್ಳಾರಿಯಲ್ಲಿ ವಾಸವಾಗಿದ್ದಾರೆ. ಆದರೆ ಕೆಲ ವರ್ಷಗಳಿಂದ ಸಾಹಿಲ್ ಜೈನ್ ಕುಟುಂಬ ಬೆಂಗಳೂರಿಗೆ ಸ್ಥಳಾಂತರಗೊಂಡಿತ್ತು.
ಸಾಹಿಲ್ ಚಿಕ್ಕಂದಿನಿಂದಲೇ ಸೋದರ ಮಾವನೊಂದಿಗೆ ಮುಂಬೈನಲ್ಲಿ ವಾಸಿಸುತ್ತಿದ್ದ. ಈಗಾಗಲೇ ಇದೇ ರೀತಿಯ ಪ್ರಕರಣದಲ್ಲಿ ಸಾಹಿಲ್ ಮುಂಬೈನಲ್ಲಿ ಒಮ್ಮೆ ಬಂಧನಕ್ಕೊಳಗಾಗಿದ್ದ. ಕಸ್ಟಮ್ಸ್ ಅಧಿಕಾರಿಗಳು ಮುಂಬೈ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದರು. ಈಗಿನ ಪ್ರಕರಣ ಮತ್ತು ಹಿಂದಿನ ಪ್ರಕರಣದಲ್ಲಿ ಚಿನ್ನವನ್ನು ಮಾರಾಟ ಮಾಡುತ್ತಿದ್ದ ಹಾಗೂ ಹವಾಲಾ ನಂಟಿನ ಆರೋಪದಲ್ಲಿಯೇ ಸಾಹಿಲ್ ಜೈನ್ ಬಂಧಿತನಾಗಿದ್ದ. ಚಿನ್ನದ ವ್ಯಾಪಾರಿಗಳ ಜೊತೆ ನಂಟು ಇರೋ ಹಿನ್ನೆಲೆ ಚಿನ್ನದ ಮಾರಾಟದ ಜವಾಬ್ದಾರಿಯೂ ಸಾಹಿಲ್ ಮೇಲಿತ್ತು.
ಸದ್ಯ ಸಾಹಿಲ್ ಜೈನ್ ವಶಕ್ಕೆ ಪಡೆದಿರುವ ಡಿಆರ್‌ಐ ಅಧಿಕಾರಿಗಳು ಸಾಹಿಲ್ ಜೈನ್ ತಂದೆ ಮಹೇಂದ್ರ ಜೈನ್‌ಗೂ ನೋಟೀಸ್ ಕಳುಹಿಸಿದ್ದಾರೆ.