ಬೆಂಗಳೂರು : ಅಕ್ರಮ ಚಿನ್ನಸಾಗಣೆ ಪ್ರಕರಣದಲ್ಲಿ ಕನ್ನಡ ನಟಿ ರನ್ಯಾ ರಾವ್ ಬಂಧನವು ಈಗ ರಾಜಕೀಯ ಅಲೆಗಳನ್ನು ಹುಟ್ಟುಹಾಕಿದೆ. ಇತ್ತೀಚಿನ ವರದಿಗಳು “ಪ್ರಮುಖ ರಾಜಕಾರಣಿ” ಭಾಗಿಯಾಗಿರುವುದನ್ನು ಸೂಚಿಸುತ್ತಿವೆ. ಕರ್ನಾಟಕ ಮುಖ್ಯಮಂತ್ರಿಯ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಅವರು “ಅವರ ಸಂಪರ್ಕಗಳು ಅಥವಾ ಸಂಬಂಧಗಳನ್ನು ಲೆಕ್ಕಿಸದೆ” ಕಾನೂನು ತನ್ನದೇ ಆದ ಕ್ರಮವನ್ನು ತೆಗೆದುಕೊಳ್ಳುತ್ತದೆ ಎಂದು ಹೇಳಿದ ಕೆಲವೇ ಗಂಟೆಗಳ ನಂತರ ಈ ವಿಚಾರ ಬಹಿರಂಗವಾಗಿದೆ.
ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ರನ್ಯಾ ರಾವ್‌ರನ್ನ ಬಂಧಿಸಿ ಡಿಆರ್‌ಐ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆಯ ವೇಳೆ ಆರೋಪಿಯ ಕೃತ್ಯದ ಹಿಂದೆ ಹಲವು ಪ್ರಭಾವಿ ವ್ಯಕ್ತಿಗಳು ಇರುವ ಸುಳಿವು ಪತ್ತೆಯಾಗಿದೆ. ನಟಿ ರನ್ಯಾ ರಾವ್‌ಗೆ ಹಲವು ರಾಜಕೀಯ ನಾಯಕರ ಜೊತೆ ಸಂಪರ್ಕ ಇದೆ ಎನ್ನಲಾಗಿದೆ. ಅದರಲ್ಲೂ ಕಾಂಗ್ರೆಸ್ ಸರ್ಕಾರದ ಪ್ರಭಾವಿ ರಾಜಕಾರಣಿಯ ಹೆಸರು ಇದರಲ್ಲಿ ಕೇಳಿ ಬಂದಿದೆ ಎಂದು ಹೇಳಲಾಗಿದೆ.
ರನ್ಯಾ ರಾವ್ ಬಂಧನವಾಗುತ್ತಿದ್ದಂತೆ ಪ್ರಭಾವಿ ಸಚಿವರು ಈ ಕೇಸ್ ಅನ್ನು ಮ್ಯಾನೇಜ್ ಮಾಡಲು ಕಸರತ್ತು ಮಾಡಿದ್ದಾರೆ. ಆದರೆ ಕಂದಾಯ ಗುಪ್ತಚರ ನಿರ್ದೇಶನಾಲಯ ಅಧಿಕಾರಿಗಳು ಆರೋಪಿಯನ್ನು ಬಂಧಿಸಿ ತನಿಖೆ ಮುಂದುವರಿಸಿದ್ದಾರೆ. ಒಂದು ವೇಳೆ ಮಹತ್ವದ ಸಾಕ್ಷಿಗಳು ಪತ್ತೆಯಾದ್ರೆ ಪ್ರಭಾವಿ ರಾಜಕಾರಣಿಯ ಸಚಿವ ಸ್ಥಾನಕ್ಕೆ ಕುತ್ತು ಬರುವ ಸಾಧ್ಯತೆ ಇದೆ. ಆದರೆ ಆ ಪ್ರಭಾವಿ ಸಚಿವ ಯಾರು? ಏನಿವರ ಸಂಬಂಧ ಎಲ್ಲಾ ಮಾಹಿತಿ ಇನ್ನೂ ಬಹಿರಂಗವಾಗಿಲ್ಲ.