ಗಾಜಿಯಾಬಾದ್: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಸ್ಮಶಾನಕ್ಕೆ ಎಳೆದೊಯ್ದು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಗಾಜಿಯಾಬಾದ್ನಲ್ಲಿ ನಡೆದಿದೆ.
ಆರೋಪಿಗಳಲ್ಲಿ ಒಬ್ಬ ಆ ಬಾಲಕಿಗೆ ಪರಿಚಯವಿದ್ದ, ಆತನೇ ಕರೆ ಮಾಡಿ ಆಕೆಯನ್ನು ಕರೆಸಿಕೊಂಡು ಸ್ನೇಹಿತನ ಜತೆ ಸೇರಿ ಅಪಹರಿಸಿದ್ದ. ಸ್ಮಶಾನಕ್ಕೆ ಕರೆದೊಯ್ದರೆ ಆ ಕಡೆಗೆ ಯಾರೂ ಬರುವುದಿಲ್ಲವೆಂದು ಅಲ್ಲಿಗೆ ಎಳೆದೊಯ್ದು ಅತ್ಯಾಚಾರವೆಸಗಿದ್ದಾರೆ. ಬಾಲಕಿಯ ದೂರಿನ ಆಧಾರದ ಮೇಲೆ ಅಶ್ರಫ್ ಹಾಗೂ ಮತ್ತೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ಸಂತ್ರಸ್ತೆ ಕೂಗಾಡಿದಾಗ ಆರೋಪಿ ಆಕೆಯ ಬಾಯಿಯನ್ನು ಬಟ್ಟೆಯಿಂದ ಮುಚ್ಚಿ ಥಳಿಸಿದ್ದಾನೆ. ಸಂತ್ರಸ್ತೆ ತನ್ನ ಮೇಲೆ ನಡೆದ ದೌರ್ಜನ್ಯವನ್ನು ತನ್ನ ಪೋಷಕರಿಗೆ ವಿವರಿಸಿದಾಗ ಅವರು ತಕ್ಷಣ ಆಕೆಯನ್ನು ನಿವಾರಿ ಪೊಲೀಸ್ ಠಾಣೆಗೆ ಕರೆತಂದು ಎಫ್‌ಐಆರ್ ದಾಖಲಿಸಿದ್ದಾರೆ. ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಮ್ಯಾಜಿಸ್ಟ್ರೇಟ್ ಮುಂದೆ ಆಕೆಯ ಹೇಳಿಕೆಯನ್ನು ದಾಖಲಿಸಲಾಗಿದೆ.
ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಇತ್ತೀಚೆಗೆ ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ಇದೇ ರೀತಿಯ ಪ್ರಕರಣ ಕಂಡುಬಂದಿತ್ತು. orphanage ಅನಾಥಾಶ್ರಮದಲ್ಲಿ ವಿಷಾಹಾರ ಸೇವಿಸಿ ಇಬ್ಬರು ಮಕ್ಕಳು ಸಾವು