ಮುಂಬೈ : ಜಿಮ್ನಲ್ಲಿ ವರ್ಕೌಟ್ ಮಾಡುವಾಗ ಎಡವಟ್ಟು ಸಂಭವಿಸಿ ನಟಿ ರಶ್ಮಿಕಾ ಮಂದಣ್ಣ ಕಾಲಿಗೆ ಗಾಯ ಮಾಡಿಕೊಂಡಿದ್ದು, ಸದ್ಯ ಬೆಡ್ ರೆಸ್ಟ್ ನಲ್ಲಿದ್ದಾರೆ. ಹೀಗಾಗಿ ಅವರು ನಿರ್ದೇಶಕರ ಬಳಿ ಕ್ಷಮೆಯಾಚಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಜಿಮ್ನಲ್ಲಿ ನಾನು ಗಾಯಗೊಂಡಿದ್ದೇನೆ. ಮುಂದಿನ ಕೆಲ ವಾರ ಅಥವಾ ತಿಂಗಳ ಕಾಲ ನಾನು ವಿಶ್ರಾಂತಿಯಲ್ಲಿರುತ್ತೇನೆ. ಚೇತರಿಕೆಯಾಗಲು ಎಷ್ಟು ಸಮಯ ಬೇಕಾಗಬಹುದು ಎನ್ನುವುದು ದೇವರಿಗೆ ಮಾತ್ರ ತಿಳಿದಿದೆ. ನನ್ನ ಕಾಲಿನ ನೋವು ಗುಣವಾದ ಬಳಿಕ ನಾನು ಥಾಮ, ಸಿಕಂದರ್ ಮತ್ತು ಕುಬೇರ ಸೆಟ್ಗೆ ಮರಳುತ್ತೇನೆ. ಈ ವಿಳಂಬಕ್ಕೆ ಕ್ಷಮೆ ಕೋರುತ್ತೇನೆ ಎಂದು ತಿಳಿಸಿದ್ದಾರೆ.
ರಶ್ಮಿಕಾ ಮಂದಣ್ಣ ಅವರು ಸಲ್ಮಾನ್ ಖಾನ್ ನಟನೆಯ ಸಿಖಂದರ್ ಚಿತ್ರದಲ್ಲಿ ನಟಿಸಲಿದ್ದಾರೆ. ಈ ಸಿನಿಮಾವನ್ನು ಎ.ಆರ್. ಮುರುಗದಾಸ್ ನಿರ್ದೇಶಿಸುತ್ತಿದ್ದು, ನಾಡಿಯಾಡ್ವಾಲಾ ನಿರ್ಮಾಣ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ಸಲ್ಮಾನ್ ಖಾನ್ ದ್ವಿಪಾತ್ರದಲ್ಲಿ ನಟಿಸುತ್ತಿದ್ದು, ಕಾಜಲ್ ಅಗರ್ವಾಲ್, ರಶ್ಮಿಕಾ, ಸತ್ಯರಾಜ್, ಶರ್ಮಾನ್ ಜೋಶಿ ಮತ್ತು ಪ್ರತೀಕ್ ಬಬ್ಬರ್ ರಂತಹ ದೊಡ್ಡ ತಾರಾಂಗಣವಿದೆ. ಇನ್ನು ಈ ಸಿನಿಮಾವಿ 2025 ರ ಈದ್ ಹಬ್ಬಕ್ಕೆ ಬಿಡುಗಡೆಯಾಗಲಿದೆ.