ಬೆಂಗಳೂರು: ಐಪಿಎಲ್ ಮ್ಯಾಚ್‌ಗಳ ಟಿಕೆಟ್‌ಗಳು ಎಷ್ಟೇ ಕಷ್ಟಪಟ್ಟರೂ ಕೂಡ ಸಿಗುತ್ತಿಲ್ಲ. ಗುರುವಾರ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಆರ್‌ಸಿಬಿ ಹಾಗೂ ದೆಹಲಿ ನಡುವಿನ ಪಂದ್ಯದ ಟಿಕೆಟ್‌ಗಳನ್ನ ದುಪ್ಪಟ್ಟು ಬೆಲೆಗೆ ಬ್ಲಾಕ್‌ನಲ್ಲಿ ಮಾರಾಟ ಮಾಡುತ್ತಿದ್ದ 8 ಮಂದಿ ಆರೋಪಿಗಳನ್ನ ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಚಿನ್ನಸ್ವಾಮಿ ಸ್ಟೇಡಿಯಂನ ಸುತ್ತಮುತ್ತ, ಕಬ್ಬನ್ ಪಾರ್ಕ್ ಒಳಗೆ ಆರೋಪಿಗಳು ಟಿಕೆಟ್‌ಗಳನ್ನು ದುಪ್ಪಟ್ಟು ಬೆಲೆಗೆ ಮಾರಾಟ ಮಾಡುತ್ತಿದ್ದರು. ಹೀಗೆ ಬ್ಲಾಕ್‌ನಲ್ಲಿ ಟಿಕೆಟ್ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಸಿಸಿಬಿ ಡಿಸಿಪಿ ಅಕಾಯ್ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಬಂಧಿಸಲಾಗಿದೆ.
ಮಫ್ತಿಯಲ್ಲಿ ಟಿಕೆಟ್ ಖರೀದಿಸುವ ನೆಪದಲ್ಲಿ ಕಾರ್ಯಾಚರಣೆ ನಡೆಸಿರುವ ಸಿಸಿಬಿ ಪೊಲೀಸರು, ಆರೋಪಿಗಳನ್ನು ಬಂಧಿಸಿ ಕಬ್ಬನ್ ಪಾರ್ಕ್ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ಈ ಬಗ್ಗೆ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಂಧಿತರನ್ನು ವಿಚಾರಣೆ ನಡೆಸಲಾಗುತ್ತಿದೆ.
ಬ್ಲಾಕ್ ಟಿಕೆಟ್ ಹಿಂದೆ ಯಾರಿದ್ದಾರೆ. ಟಿಕೆಟ್ ಹೇಗೆ ಸಿಕ್ತು ಎಂಬ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.