ಚೆನ್ನೈ: ತಮಿಳುನಾಡು ಸರ್ಕಾರ ಮದ್ಯಪಾನ ನಿಷೇಧಕ್ಕೆ ಮುಂದಾಗಿದೆ. ಈ ನಿಟ್ಟಿನಲ್ಲಿ ಡಿಎಂಕೆ ಸರ್ಕಾರ ವಿಧಾನಸಭೆಯಲ್ಲಿ ಮಹತ್ವದ ಹೇಳಿಕೆ ನೀಡಿದೆ.
ಮದ್ಯದಂಗಡಿಗಳನ್ನು ಮುಚ್ಚಲಾಗುವುದು ಎಂದು ಸಚಿವರು ಘೋಷಿಸಿದ್ದು, ಹಂತ ಹಂತವಾಗಿ ಅಂಗಡಿಗಳನ್ನು ಎತ್ತಂಗಡಿ ಮಾಡಲಾಗುವುದು ಎಂದು ಹೇಳಿದ್ದಾರೆ.
ಮೊದಲ ಹಂತದಲ್ಲಿ 500 ಅಂಗಡಿಗಳನ್ನು ಮುಚ್ಚಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ. ತಮಿಳುನಾಡಿನಲ್ಲಿ 5 ಸಾವಿರಕ್ಕೂ ಹೆಚ್ಚು ಮದ್ಯದಂಗಡಿಗಳಿವೆ. !