ಖ್ಯಾತ ಗಾಯಕಿ, ಕನ್ನಡ ಕಿರುತೆರೆಯ ಜನಪ್ರಿಯ ನಟಿ ಪೃಥ್ವಿ ಭಟ್ ಇತ್ತೀಚಿಗಷ್ಟೇ ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಅಭಿಷೇಕ್ ಎನ್ನುವವರನ್ನು ಮದುವೆಯಾಗಿದ್ದಾರೆ. ಹಸೆಮಣೆ ಏರಿ ಹೊಸ ಜೀವನಕ್ಕೆ ಕಾಲಿಟ್ಟ ಗಾಯಕಿ ಹಾಗೂ ಆಕೆಯ ಪತಿ ವಿರುದ್ಧ ಆರೋಪ ಕೇಳಿಬಂದಿದೆ. ಪೃಥ್ವಿ ಭಟ್ ತಂದೆ ಮಗಳು ನಮ್ಮ ವಿರೋಧದ ನಡುವೆಯೂ ಮನೆ ಬಿಟ್ಟು ಹೋಗಿ ಮದುವೆಯಾಗಿದ್ದಾಳೆ. ಆಕೆಯನ್ನು ವಶೀಕರಣ ಮಾಡಿಕೊಂಡು ಮದುವೆ ಮಾಡಿಕೊಳ್ಳಲಾಗಿದೆ ಎಂದು ಆರೋಪಿಸಿದ್ದಾರೆ.
ಗಾಯಕಿ ಪೃಥ್ವಿ ಭಟ್ ತಮ್ಮ ಪೋಷಕರ ವಿರೋಧದ ನಡುವೆ ಮನೆ ಬಿಟ್ಟು ಹೋಗಿ ಮದುವೆಯಾಗಿದ್ದಾರೆ ಎನ್ನುವ ಮಾಹಿತಿ ಇದರಿಂದ ಬಹಿರಂಗವಾಗಿದೆ. ಪ್ರಥ್ವಿ ಭಟ್ ತಂದೆ ಮಾತನಾಡಿದ್ದಾರೆ ಎನ್ನಲಾದ ಆಡಿಯೋವೊಂದು ಈಗ ಎಲ್ಲೆಡೆ ವೈರಲ್ ಆಗುತ್ತಿದ್ದು, ಈ ಆಡಿಯೋದಲ್ಲಿ ಪೃಥ್ವಿ ಭಟ್ ತಂದೆ ಸಂಗೀತ ಶಿಕ್ಷಕ ನರಹರಿ ದೀಕ್ಷಿತ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.