ಬೆಂಗಳೂರು: ಹೌದು ರಾಜ್ಯದಲ್ಲಿರುವ ಕುರುಬ ಸಮಾಜವನ್ನು ಎಸ್ಟಿಗೆ ಸೇರ್ಪಡೆ ಮಾಡುವಂತೆ ಕೋರಿ ರಾಜ್ಯ ಸರ್ಕಾರ ಕೇಂದ್ರಕ್ಕೆ ಶಿಫಾರಸು ಮಾಡಿದೆ.
ಈ ಬಗ್ಗೆ ಕರ್ನಾಟಕ ಬುಡಕಟ್ಟು ಸಂಸ್ಥೆ ನೀಡಿದ ವರದಿ ಆಧಾರದ ಮೇಲೆ ಮಂಗಳವಾರ ನಡೆದ ಅಧಿವೇಶನದಲ್ಲಿ ಈ ನಿರ್ಧಾರ ಕೈಗೊಂಡು ಕೇಂದ್ರಕ್ಕೆ ಪತ್ರ ಬರೆದಿದೆ.
ಈ ಹಿಂದೆ 2020-21ರಲ್ಲಿ ಸಮುದಾಯದ ಮುಖಂಡರು ಕುರುಬ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆಂದು ಒತ್ತಾಯಿಸಿದ್ದರು. ಇದರನ್ವಯ ವರದಿ ನೀಡುವಂತೆ ಬುಡಕಟ್ಟು ಸಂಸ್ಥೆಗೆ ಸರ್ಕಾರ ಸೂಚಿಸಿತ್ತು.