ದೇಶದ ಸಾರ್ವಜನಿಕ ಬ್ಯಾಂಕ್‌ಗಳಲ್ಲಿ ಒಂದಾಗಿರುವ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ 253 ಸ್ಪೆಷಲಿಸ್ಟ್ ಅಧಿಕಾರಿ ಹುದ್ದೆಗಳಿಗೆ ನೇಮಕಾತಿ ಆರಂಭವಾಗಿದೆ.
ಈ ಬಗ್ಗೆ ಬ್ಯಾಂಕ್ ಅಧಿಕೃತ ವೆಬ್‌ಸೈಟ್‌ನಲ್ಲಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಸ್ಪೆಷಲಿಸ್ಟ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆ ಮತ್ತು ಇತರ ಅಗತ್ಯಗಳನ್ನು ಈ ಅಧಿಸೂಚನೆಯಲ್ಲಿ ವಿವರವಾಗಿ ನೀಡಲಾಗಿದೆ.
ಸಂಸ್ಥೆಯ ಹೆಸರು: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ
ಹುದ್ದೆಯ ಹೆಸರು: ಸ್ಪೆಷಲಿಸ್ಟ್ ಆಫೀಸರ್ (ವಿಶೇಷ ಅಧಿಕಾರಿ)
ಹುದ್ದೆಯ ಸಂಖ್ಯೆ: 253 ಹುದ್ದೆಗಳು
ಶೈಕ್ಷಣಿಕ ಅರ್ಹತೆ: ಮಾನ್ಯತೆ ಪಡೆ ಯಾವುದೇ ವಿಶ್ವವಿದ್ಯಾನಿಲಯದಿಂದ ಪದವಿ ಪಡೆದಿರಬೇಕು. ಮತ್ತು ಹುದ್ದೆಗಳಿಗೆ ಅನುಗುಣವಾಗಿ ಸಂಬಂಧಪಟ್ಟ ವಿಷಯದಲ್ಲಿ ಅಥವಾ ವಿಭಾಗದಲ್ಲಿ ಪದವಿ ಪಡೆದಿರಬೇಕು.
ಅನುಭವ: ನಾಲ್ಕರಿಂದ ಎಂಟು ವರ್ಷದ ಸೇವಾ ಅನುಭವ ಇದ್ದವರಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಲಾಗುವುದು
ವಯೋಮಿತಿ: ಕನಿಷ್ಟ 23 ಹಾಗೂ ಗರಿಷ್ಟ 40 ವರ್ಷ ವಯೋಮಿತಿ. ನಿಯಮಾನುಸಾರ ಸಡಿಲಿಕೆ ಇರುತ್ತದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಡಿಸೆಂಬರ್ 3, 2024
ನೇಮಕಾತಿಗೆ ಆನ್‌ಲೈನ್ ಪರೀಕ್ಷೆಗಳನ್ನು ನಡೆಸಲಿದ್ದು, ಈ ಪರೀಕ್ಷೆಗಳು 2025ರ ಜನವರಿಯಲ್ಲಿ ನಡೆಯಲಿದೆ.
ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು www.centralbankofindia.co.in/en ನ್ನು ಸಂಪರ್ಕಿಸಬಹುದು.